RSS ವಿಜಯದಶಮಿ ಕಾರ್ಯಕ್ರಮಕ್ಕೆ ಮಾಜಿ ರಾಷ್ಟ್ರಪತಿ ಕೋವಿಂದ್ ಮುಖ್ಯ ಅತಿಥಿ
ಅಕ್ಟೋಬರ್ 2 ರಂದು, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಜಯದಶಮಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಾರೆ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಪಂಚದಾದ್ಯಂತ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(RSS), ಅಕ್ಟೋಬರ್ 2 ರಂದು ವಿಜಯದಶಮಿಯಿಂದ ಪ್ರಾರಂಭವಾಗುವ ಕಾರ್ಯಕ್ರಮಗಳೊಂದಿಗೆ ತನ್ನ ಶತಮಾನೋತ್ಸವ ವರ್ಷವನ್ನು ಆಚರಿಸಲಿದೆ.
ಆರ್‌ಎಸ್‌ಎಸ್‌ನ ಈ ವಿಜಯದಶಮಿ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ.
2026 ರ ವಿಜಯದಶಮಿಯವರೆಗೆ ಸಂಘಟನೆಯ 100 ವರ್ಷಗಳನ್ನು ಆಚರಿಸುವ ಕಾರ್ಯಕ್ರಮಗಳು ನಡೆಯಲಿವೆ ಎಂದು ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನಿಲ್ ಅಂಬೇಕರ್ ಸೋಮವಾರ ನಾಗ್ಪುರದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
"ಅಕ್ಟೋಬರ್ 2 ರಂದು, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಜಯದಶಮಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಾರೆ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಪಂಚದಾದ್ಯಂತ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಜಾಜ್ ಫಿನ್‌ಸರ್ವ್ ಅಧ್ಯಕ್ಷ ಸಂಜೀವ್ ಬಜಾಜ್, ಡೆಕ್ಕನ್ ಇಂಡಸ್ಟ್ರೀಸ್‌ನ ಕೆ.ವಿ. ಕಾರ್ತಿಕ್ ಮತ್ತು ಲೆಫ್ಟಿನೆಂಟ್ ಜನರಲ್ ರಾಣಾ ಪ್ರತಾಪ್ ಕಲಿತಾ ಅವರು ಈ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿದ್ದಾರೆ" ಎಂದು ಅಂಬೇಕರ್ ಮಾಹಿತಿ ನೀಡಿದ್ದಾರೆ.
ಅಕ್ಟೋಬರ್ 2 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಘಾನಾ, ದಕ್ಷಿಣ ಆಫ್ರಿಕಾ, ಥೈಲ್ಯಾಂಡ್, ಇಂಡೋನೇಷ್ಯಾ, ಯುಕೆ ಮತ್ತು ಯುಎಸ್ಎಗಳಿಂದ ಅತಿಥಿಗಳು ಭಾಗವಹಿಸಲಿದ್ದು, ವಿದೇಶಿ ಮಾಧ್ಯಮಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



