ದೇಶ

ಉತ್ತರ ಪ್ರದೇಶ: ಕೆಟ್ಟು ನಿಂತಿದ್ದ ಎಸ್‌ಯುವಿಗೆ ವಾಹನ ಡಿಕ್ಕಿ; ನಾಲ್ವರು ಸಾವು

ಗಂಗಾ ನಗರ ಪ್ರದೇಶದ ಬಿಗಾಹಿಯಾ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಉಪ ಪೊಲೀಸ್ ಆಯುಕ್ತ(ಗಂಗಾ ನಗರ) ಕುಲದೀಪ್ ಗುಣವತ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಉತ್ತರ ಪ್ರದೇಶ: ಕೆಟ್ಟು ನಿಂತಿದ್ದ ಎಸ್‌ಯುವಿಗೆ ವಾಹನ ಡಿಕ್ಕಿ; ನಾಲ್ವರು ಸಾವು
ಸಾಂದರ್ಭಿಕ ಚಿತ್ರ
Published On :

ಪ್ರಯಾಗರಾಜ್: ಕಾನ್ಪುರ-ವಾರಣಾಸಿ ಹೆದ್ದಾರಿಯಲ್ಲಿ ಸೋಮವಾರ ಅಪರಿಚಿತ ವಾಹನವೊಂದು, ಕೆಟ್ಟು ನಿಂತಿದ್ದ ಎಸ್‌ಯುವಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಗಾ ನಗರ ಪ್ರದೇಶದ ಬಿಗಾಹಿಯಾ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಉಪ ಪೊಲೀಸ್ ಆಯುಕ್ತ(ಗಂಗಾ ನಗರ) ಕುಲದೀಪ್ ಗುಣವತ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಎಸ್‌ಯುವಿ ಕೆಟ್ಟು ರಸ್ತೆಬದಿಯಲ್ಲಿ ನಿಂತಿತ್ತು. ಅದರಲ್ಲಿದ್ದ ನಾಲ್ವರು ಪ್ರಯಾಣಿಕರು ಕಾರಿನ ಮುಂದೆ ಮಲಗಿದ್ದರು ಮತ್ತು ಮೂವರು ಮಹಿಳೆಯರು ಒಳಗೆ ವಿಶ್ರಾಂತಿ ಪಡೆಯುತ್ತಿದ್ದರು.

ಮೃತರನ್ನು ಕಾನ್ಪುರ ನಿವಾಸಿಗಳಾದ ಸುರೇಶ್ ಸೈನಿ, ಸುರೇಶ್ ಬಾಜ್‌ಪೈ, ಅವರ ಪತ್ನಿ ಮತ್ತು ರಾಮಸಾಗರ್ ಅವಸ್ಥಿ ಎಂದು ಗುರುತಿಸಲಾಗಿದೆ ಎಂದು ಗುಣವತ್ ಹೇಳಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನದ ಚಾಲಕನನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.