Rs 100 crore stolen: ತಿರುಪತಿ 'ಹುಂಡಿ'ಯಲ್ಲಿ 100 ಕೋಟಿ ರೂ ಗೂ ಅಧಿಕ ಹಣ ಕಳ್ಳತನ, CCTV ಕ್ಯಾಮರಾದಲ್ಲಿ ಸೆರೆ!
ತಿರುಮಲ ತಿರುಪತಿ ದೇವಸ್ತಾನಮ್ಸ್ (ಟಿಟಿಡಿ) ಸದಸ್ಯರೂ ಆಗಿರುವ ಭಾನು ಪ್ರಕಾಶ್ ರೆಡ್ಡಿ, ದೇವಸ್ಥಾನದ ಸಿಬ್ಬಂದಿ ರವಿಕುಮಾರ್ ಕಾಣಿಗೆ ಪೆಟ್ಟಿಗೆಯಿಂದ ಹಣವನ್ನು ಕದ್ದಿದ್ದಾರೆ ಎಂದು ಆರೋಪಿಸಿದ್ದು, ಈ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದಾರೆ.

ತಿರುಪತಿ: ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ YSR ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಪರಕಾಮಣಿ (ಹುಂಡಿಯಲ್ಲಿ ಭಕ್ತರು ಹಾಕಿದ್ದ) ರೂ.100 ಕೋಟಿ ಗೂ ಅಧಿಕ ಹಣ ಕಳ್ಳತನವಾಗಿದೆ ಎಂದು ಬಿಜೆಪಿ ಮುಖಂಡರೊಬ್ಬರು ಆರೋಪಿಸಿದ್ದಾರೆ.
ತಿರುಮಲ ತಿರುಪತಿ ದೇವಸ್ತಾನಮ್ಸ್ (ಟಿಟಿಡಿ) ಸದಸ್ಯರೂ ಆಗಿರುವ ಭಾನು ಪ್ರಕಾಶ್ ರೆಡ್ಡಿ, ದೇವಸ್ಥಾನದ ಸಿಬ್ಬಂದಿ ರವಿಕುಮಾರ್ ಕಾಣಿಗೆ ಪೆಟ್ಟಿಗೆಯಿಂದ ಹಣವನ್ನು ಕದ್ದಿದ್ದಾರೆ ಎಂದು ಆರೋಪಿಸಿದ್ದು, ಈ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದಾರೆ.
ಲೂಟಿ ಮಾಡಿದ ಹಣವನ್ನು ಬಳಸಿಕೊಂಡು ರಿಯಲ್ ಎಸ್ಟೇಟ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಲಾಗಿದೆ. ಅಕ್ರಮ ಹಣವನ್ನು ಜಗನ್ ರೆಡ್ಡಿ ಅವರ ಮನೆ, ತಾಡೆಪಲ್ಲಿ ಪ್ಯಾಲೇಸ್‌ಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.
2019 ರಿಂದ 2024 ರವರೆಗೆ ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ಟಿಟಿಡಿಯ ಇತಿಹಾಸದಲ್ಲಿ ಅತ್ಯಧಿಕ ರೂ. 100 ಕೋಟಿ ಲೂಟಿ ಮಾಡಲಾಗಿದೆ ಎಂದು ರೆಡ್ಡಿ ಆರೋಪಿಸಿದ್ದಾರೆ.
ಬಿಜೆಪಿ ನೇತೃತ್ವದ ಎನ್‌ಡಿಎಗೆ ಸೇರಿರುವ ಟಿಡಿಪಿ ನಾಯಕ ನಾರಾ ಲೋಕೇಶ್ , ತಮ್ಮ ಎಕ್ಸ್ ಖಾತೆಯಲ್ಲಿ 'ಲೂಟಿ' ತೋರಿಸುತ್ತಿರುವ ಸಿಸಿಟಿವಿ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ಭಕ್ತರು ಕಾಣಿಕೆಯಾಗಿ ಹುಂಡಿಗೆ ಹಾಕಿದ್ದ ಹಣವನ್ನು ಲೂಟಿ ಮಾಡಲಾಗಿದೆ ಎಂದು ರೆಡ್ಡಿ ಹೇಳಿದ್ದಾರೆ.
ಹೈಕೋರ್ಟ್ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದ್ದು, ಒಂದು ತಿಂಗಳೊಳಗೆ ತನಿಖೆ ಮತ್ತು ಮುಚ್ಚಿದ ಕವರ್ ವರದಿಯನ್ನು ಆದೇಶಿಸಿದೆ. ಮಂಡಳಿಯ ನಿರ್ಧಾರಗಳು ಮತ್ತು ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ರೆಡ್ಡಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



