Agni-Prime missile: ರೈಲಿನಿಂದ ಉಡಾಯಿಸಬಹುದಾದ ಅಗ್ನಿ ಪ್ರೈಂ ಕ್ಷಿಪಣಿ ಪರೀಕ್ಷೆ ಯಶಸ್ವಿ; ಭಾರತದಿಂದ ಮೊದಲ ಪ್ರಯೋಗ; Video
ಭವಿಷ್ಯದ ಪೀಳಿಗೆಯ ಕ್ಷಿಪಣಿಯನ್ನು 2,000 ಕಿಲೋಮೀಟರ್‌ಗಳ ವ್ಯಾಪ್ತಿಯನ್ನು ಒಳಗೊಳ್ಳಲು ವಿನ್ಯಾಸಗೊಳಿಸಲಾಗಿದೆ.

ಭಾರತವು ರೈಲಿನಿಂದ ಉಡಾಯಿಸಬಹುದಾದ ಮೊಬೈಲ್ ಲಾಂಚರ್ ವ್ಯವಸ್ಥೆಯಿಂದ ಅಗ್ನಿ-ಪ್ರೈಮ್ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆಯನ್ನು ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ತಿಳಿಸಿದ್ದಾರೆ.
ಭವಿಷ್ಯದ ಪೀಳಿಗೆಯ ಕ್ಷಿಪಣಿಯನ್ನು 2,000 ಕಿಲೋಮೀಟರ್‌ಗಳ ವ್ಯಾಪ್ತಿಯನ್ನು ಒಳಗೊಳ್ಳಲು ವಿನ್ಯಾಸಗೊಳಿಸಲಾಗಿದೆ. ವಿವಿಧ ಸುಧಾರಿತ ವೈಶಿಷ್ಟ್ಯಗಳನ್ನು ಹೊಂದಿದೆ. ವಿಶೇಷವಾಗಿ ವಿನ್ಯಾಸಗೊಳಿಸಲಾದ ರೈಲು ಆಧಾರಿತ ಮೊಬೈಲ್ ಲಾಂಚರ್‌ನಿಂದ ನಡೆಸಲಾದ ಈ ರೀತಿಯ ಮೊದಲ ಉಡಾವಣೆ ಇದಾಗಿದೆ.
ಇದು ರೈಲು ಜಾಲದಲ್ಲಿ ಚಲಿಸುವ ಸಾಮರ್ಥ್ಯವನ್ನು ಹೊಂದಿದ್ದು, ಬಳಕೆದಾರರಿಗೆ ದೇಶಾದ್ಯಂತ ಚಲನಶೀಲತೆಯನ್ನು ಹೊಂದಲು ಮತ್ತು ಕ್ಷೀಣ ಗೋಚರ ಪರಿಸ್ಥಿತಿಯಲ್ಲಿ ಕಡಿಮೆ ಪ್ರತಿಕ್ರಿಯೆ ಸಮಯದಲ್ಲಿ ಉಡಾವಣೆ ಮಾಡಲು ಅನುವು ಮಾಡಿಕೊಡುತ್ತದೆ ಎಂದು ರಕ್ಷಣಾ ಸಚಿವರು ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


