ನಾಳೆ ಪ್ರಧಾನಿ ಮೋದಿಯಿಂದ ಬಿಹಾರದ 75 ಲಕ್ಷ ಮಹಿಳೆಯರಿಗೆ ತಲಾ 10 ಸಾವಿರ ರೂ ವರ್ಗಾವಣೆ
ಈ ಯೋಜನೆಯು ಮಹಿಳೆಯರನ್ನು "ಆತ್ಮನಿರ್ಭರ್"(ಸ್ವಾವಲಂಬಿ)ರನ್ನಾಗಿ ಮಾಡುವುದು ಮತ್ತು ಸ್ವ-ಉದ್ಯೋಗ ಹಾಗೂ ಜೀವನೋಪಾಯದ ಅವಕಾಶಗಳ ಮೂಲಕ ಸಬಲೀಕರಣವನ್ನು ಉತ್ತೇಜಿಸುವ ಗುರಿ ಹೊಂದಿದೆ.

ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬಿಹಾರದ "ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ"ಗೆ ಚಾಲನೆ ನೀಡಲಿದ್ದು, ರಾಜ್ಯಾದ್ಯಂತ 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ರೂ. ವರ್ಗಾಯಿಸುವ ಮೂಲಕ ಒಟ್ಟು 7,500 ಕೋಟಿ ರೂ. ಮಹಿಳೆಯರ ಖಾತೆಗೆ ಜಮೆ ಮಾಡಲಿದ್ದಾರೆ.
ಈ ಯೋಜನೆಯು ಮಹಿಳೆಯರನ್ನು "ಆತ್ಮನಿರ್ಭರ್"(ಸ್ವಾವಲಂಬಿ)ರನ್ನಾಗಿ ಮಾಡುವುದು ಮತ್ತು ಸ್ವ-ಉದ್ಯೋಗ ಹಾಗೂ ಜೀವನೋಪಾಯದ ಅವಕಾಶಗಳ ಮೂಲಕ ಸಬಲೀಕರಣವನ್ನು ಉತ್ತೇಜಿಸುವ ಗುರಿ ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಯೋಜನೆ ಅಡಿಯಲ್ಲಿ ರಾಜ್ಯದ ಪ್ರತಿ ಕುಟುಂಬದ ಒಬ್ಬ ಮಹಿಳೆಗೆ ಆರ್ಥಿಕ ನೆರವು ನೀಡಲಾಗುವುದು. ಈ ಹಣ ಅವರು ತಮ್ಮ ಆಯ್ಕೆಯ ಉದ್ಯೋಗ ಅಥವಾ ಜೀವನೋಪಾಯ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುವು ಮಾಡಿಕೊಡುತ್ತದೆ ಎಂದಿದ್ದಾರೆ.
10,000 ರೂ.ಗಳ ಆರಂಭಿಕ ಅನುದಾನವನ್ನು ನೀಡಲಾಗುವುದು, ನಂತರ ಹಂತ ಹಂತವಾಗಿ 2 ಲಕ್ಷ ರೂ.ಗಳವರೆಗೆ ಹೆಚ್ಚುವರಿ ಆರ್ಥಿಕ ಬೆಂಬಲ ನೀಡುವ ಸಾಧ್ಯತೆ ಇದೆ ಅವರು ಹೇಳಿದರು.
ಈ ಯೋಜನೆಯು ಸಮುದಾಯ ಆಧಾರಿತವಾಗಿರುತ್ತದೆ ಮತ್ತು ಸ್ವ-ಸಹಾಯ ಗುಂಪುಗಳೊಂದಿಗೆ ಸಂಪರ್ಕ ಹೊಂದಿದ ಸಂಪನ್ಮೂಲ ವ್ಯಕ್ತಿಗಳು ಅವರ ಪ್ರಯತ್ನವನ್ನು ಬೆಂಬಲಿಸಲು ತರಬೇತಿ ನೀಡುತ್ತಾರೆ. ಅವರ ಉತ್ಪನ್ನಗಳ ಮಾರಾಟವನ್ನು ಬೆಂಬಲಿಸಲು, "ಗ್ರಾಮೀಣ ಹಾತ್" (ಗ್ರಾಮೀಣ ಮಾರುಕಟ್ಟೆ) ಅನ್ನು ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



