ದೇಶ

I Love Muhammad vs I Love Mahadev row: ಗುಜರಾತ್'ನಲ್ಲಿ ಭುಗಿಲೆದ್ದ ಹಿಂಸಾಚಾರ, 60 ಮಂದಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ‘ಐ ಲವ್‌ ಮುಹಮ್ಮದ್‌’ ಎಂಬ ಪೋಸ್ಟ್‌ಗೆ ಹಿಂದೂ ವ್ಯಕ್ತಿಯೊಬ್ಬ ‘ಐ ಲವ್‌ ಮಹಾದೇವ್‌’ ಎಂದು ಪೋಸ್ಟ್‌ ಹಂಚಿಕೊಂಡಿದ್ದರು. ಇದು ಗಲಭೆಗೆ ಕಾರಣವಾಗಿದೆ.

I Love Muhammad vs I Love Mahadev row: ಗುಜರಾತ್'ನಲ್ಲಿ ಭುಗಿಲೆದ್ದ ಹಿಂಸಾಚಾರ, 60 ಮಂದಿ ಬಂಧನ
ಸ್ಥಳದಲ್ಲಿ ಬಿಗಿ ಭದ್ರತೆ ನಿಯೋಜಿಸಿರುವುದು.
Published On :

ಅಹ್ಮದಾಬಾದ್: ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ಮಾಡಿದ ಪೋಸ್ಟ್ ವೊಂದು ಗುಜರಾತ್ ರಾಜ್ಯದಲ್ಲಿ ಹಿಂಸಾಚಾರ ಭುಗಿಲೇಳುವಂತೆ ಮಾಡಿದ್ದು, ಪ್ರಕರಣ ಸಂಬಂಧ ಈ ವರೆಗೂ 60 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ‘ಐ ಲವ್‌ ಮುಹಮ್ಮದ್‌’ ಎಂಬ ಪೋಸ್ಟ್‌ಗೆ ಹಿಂದೂ ವ್ಯಕ್ತಿಯೊಬ್ಬ ‘ಐ ಲವ್‌ ಮಹಾದೇವ್‌’ ಎಂದು ಪೋಸ್ಟ್‌ ಹಂಚಿಕೊಂಡಿದ್ದರು. ಇದು ಗಲಭೆಗೆ ಕಾರಣವಾಗಿದೆ.

ಹಿಂದೂ ವ್ಯಕ್ತಿಯೊಬ್ಬ ಹಂಚಿಕೊಂಡ ಪೋಸ್ಟ್‌ನಿಂದಾಗಿ ಆಕ್ರೋಶಗೊಂಡ ಮುಸ್ಲಿಂ ಸಮುದಾಯದ ಗುಂಪೊಂದು ಗಾಂಧಿನಗರ ಜಿಲ್ಲೆಯ ಬಹಿಯಾಲ್‌ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಿದ್ದು, ಅಂಗಡಿ, ವಾಹನಗಳಿಗೆ ಬೆಂಕಿ ಹಚ್ಚಿ ಗಲಭೆ ನಡೆಸಿದೆ.

ಬುಧವಾರ ರಾತ್ರಿ ಪೋಸ್ಟ್‌ ಹಂಚಿಕೊಂಡ ಹಿಂದೂ ವ್ಯಕ್ತಿಯ ಅಂಗಡಿಗೆ ನುಗ್ಗಿದ ಕಿಡಿಗೇಡಿಗಳು ವಸ್ತುಗಳನ್ನು ಹೊರಗೆಸೆದು ಬೆಂಕಿ ಹಚ್ಚಿದ್ದಾರೆ. ಅಲ್ಲದೆ, ಹಿಂದೂಗಳಿರುವ ಪ್ರದೇಶಗಳಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ.

ಇದರ ಬೆನ್ನಲ್ಲೇ ಸ್ಥಳದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಹಿಯಾಲ್‌ ಗ್ರಾಮದಿಂದ 60 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸದ್ಯ ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.