ಆಟದ ಮೈದಾನದಲ್ಲೂ Operation Sindoor: ಪಾಕ್ ಕಾಲೆಳೆದ ಪ್ರಧಾನಿ ಮೋದಿ; ಭಾರತ ತಂಡಕ್ಕೆ ಅಭಿನಂದನೆ
ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧವಾಗಿ ಭಾರತ ಸೇನೆ ಪಾಕಿಸ್ತಾನದಲ್ಲಿದ್ದ ಉಗ್ರರ ಹಡಗುತಾಣಗಳ ಮೇಲೆ ದಾಳಿಗೆ ಉಗ್ರನೆಲೆಗಳನ್ನ ಧ್ವಂಸ ಮಾಡಿತ್ತು. ಇದಕ್ಕೆ ಭಾರತ ಸರ್ಕಾರ ಆಫರೇಷನ್ ಸಿಂಧೂರ ಎಂದು ಹೆಸರಿಟ್ಟಿತ್ತು.

ನವದೆಹಲಿ: ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿ ಏಷ್ಯಾ ಕಪ್ ಗೆದ್ದ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಾಕಿಸ್ತಾನದ ಕಾಲೆಳೆದಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದಿರುವ ಮೋದಿಯವರು, ಭಾರತದ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದು, ಇದೇ ವೇಳೆ ಪಾಕಿಸ್ತಾನದ ಕಾಲೆಳೆದಿದ್ದಾರೆ.
ಕ್ರೀಡಾ ಮೈದಾನದಲ್ಲೂ ಆಪರೇಷನ್ ಸಿಂಧೂರ. ಫಲಿತಾಂಶ ಒಂದೇ - ಭಾರತ ಗೆದ್ದಿದೆ. ನಮ್ಮ ಕ್ರಿಕೆಟಿಗರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧವಾಗಿ ಭಾರತ ಸೇನೆ ಪಾಕಿಸ್ತಾನದಲ್ಲಿದ್ದ ಉಗ್ರರ ಹಡಗುತಾಣಗಳ ಮೇಲೆ ದಾಳಿಗೆ ಉಗ್ರನೆಲೆಗಳನ್ನ ಧ್ವಂಸ ಮಾಡಿತ್ತು. ಇದಕ್ಕೆ ಭಾರತ ಸರ್ಕಾರ ಆಫರೇಷನ್ ಸಿಂಧೂರ ಎಂದು ಹೆಸರಿಟ್ಟಿತ್ತು. ಈ ದಾಳಿಯ ವೇಳೆ ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳನ್ನ ಭಾರತ ವಾಯು ಸೇನ್ ಧ್ವಂಸಗೊಳಿಸಿತ್ತು.
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಜೈಶ್-ಎ-ಮೊಹಮ್ಮದ್ (JeM) ಮತ್ತು ಲಷ್ಕರ್-ಎ-ತೈಬಾ (LeT) ನಂತಹ ಉಗ್ರ ಸಂಘಟನೆಗಳ 9 ತರಬೇತಿ ಶಿಬಿರಗಳನ್ನು ನಾಶಪಡಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ಭಾರತದ ಮೇಲೆ ದಾಳಿ ನಡೆಸಿತ್ತು. ಇದಕ್ಖೂ ಪ್ರತಿಕ್ರಿಯೆ ನೀಡಿದ್ದ ಭಾರತೀಯ ಸೇನೆ ಹಲವು ಪಾಕಿಸ್ತಾನದ ವಾಯುನೆಲೆಗಳನ್ನ ಧ್ವಂಸ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



