ದೇಶ

Operation Arahama: ಓರ್ವ ಉಗ್ರನ ಸದೆಬಡಿದ ಭಾರತೀಯ ಸೇನಾಪಡೆ

ಸೇನಾಪಡೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ತಾವಿದ್ದ ಸ್ಥಳ ತಲುಪುತ್ತಿದ್ದಂತೆಯೇ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಸ್ಥಳವನ್ನು ಸುತ್ತುವರೆದ ಸೇನಾಪಡೆ ದಿಟ್ಟ ಉತ್ತರ ನೀಡಿ ಓರ್ವ ಉಗ್ರನನ್ನು ಹತ್ಯೆ ಮಾಡಿದೆ.

Operation Arahama: ಓರ್ವ ಉಗ್ರನ ಸದೆಬಡಿದ ಭಾರತೀಯ ಸೇನಾಪಡೆ
ಸಂಗ್ರಹ ಚಿತ್ರ
Published On :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡೇಬಲ್‌ ಜಿಲ್ಲೆಯಲ್ಲಿ ʻಆಪರೇಷನ್ ಅರಹಮಾʼ ಕಾರ್ಯಾಚರಣೆ ನಡೆಯುತ್ತಿದ್ದು, ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನಾಪಡೆಗಳು ಹೊಡೆದುರುಳಿಸುವೆ ಎಂದು ತಿಳಿದುಬಂದಿದೆ.

ಖಚಿತ ಮಾಹಿತಿಗಳ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಅಡಗಿ ಕುಳಿತಿದ್ದ ಉಗ್ರನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದೆ.

ಸೇನಾಪಡೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ತಾವಿದ್ದ ಸ್ಥಳ ತಲುಪುತ್ತಿದ್ದಂತೆಯೇ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಸ್ಥಳವನ್ನು ಸುತ್ತುವರೆದ ಸೇನಾಪಡೆ ದಿಟ್ಟ ಉತ್ತರ ನೀಡಿ ಓರ್ವ ಉಗ್ರನನ್ನು ಹತ್ಯೆ ಮಾಡಿದೆ.

ಪ್ರದೇಶದಲ್ಲಿ ಇನ್ನೂ ಹಲವು ಉಗ್ರರು ಅಡಗಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಂಡೇಬಲ್ ಜಿಲ್ಲೆಯ ಅರಹಮಾ ಪ್ರದೇಶದಲ್ಲಿ ʻಆಪರೇಷನ್ ಅರಹಮಾʼ ಕಾರ್ಯಾಚರಣೆ ಮುಂದುವರಿದಿದ್ದು. ಭದ್ರತಾ ಪಡೆಗಳು ಶೋಧ ನಡೆಸುತ್ತಿವೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಜೊತೆಗೆ ಭಾರತೀಯ ಸೇನೆಯ ಎರಡು ಅಸ್ಸಾಂ ರೆಜಿಮೆಂಟ್‌ಗಳು ಜಂಟಿ ಕಾರ್ಯಾಚರಣೆ ನಡೆಸುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.