ದೇಶ

Kerala: ಕಾಂಗ್ರೆಸ್ ಸಂಸದ Shashi Tharoor ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಬೆಂಗಾವಲು ವಾಹನವನ್ನು ತಡೆಹಿಡಿದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

Kerala: ಕಾಂಗ್ರೆಸ್ ಸಂಸದ Shashi Tharoor ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ
ಶಶಿ ತರೂರ್ ಬೆಂಗಾವಲು ಪಡೆ ಮೇಲೆ ದಾಳಿ
Published On :

ತಿರುವನಂತಪುರಂ: ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಸಂಸದ ಶಶಿತರೂರ್ ಅವರ ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ಕೇರಳದಲ್ಲಿ ವರದಿಯಾಗಿದೆ.

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಬೆಂಗಾವಲು ವಾಹನವನ್ನು ತಡೆಹಿಡಿದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ವಿಡಿಯೋವೊಂದು ಎಕ್ಸ್​ ಖಾತೆಯಲ್ಲಿ ವೈರಲ್​​ ಆಗಿದ್ದು, ಶಶಿ ತರೂರ್ ಅವರು ವಂಡೂರಿನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ತಿರುವಳ್ಳಿ ಚೆಲ್ಲಿತೋಡು ಸೇತುವೆ ಬಳಿ ಬೆಂಗಾವಲು ಪಡೆಯನ್ನು ತಡೆಹಿಡಿಯಲಾಯಿತು. ಬಳಿಕ ಅವರೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಭದ್ರತಾ ಸಿಬ್ಬಂದಿಯ ದೂರಿನ ಆಧಾರದ ಮೇಲೆ, ವಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಂತೆಯೇ ಹಲ್ಲೆ ನಡೆಸಿದ ಆರೋಪದ ಮೇರೆಗೆ ಮೂವರು ಆರೋಪಿಗಳನ್ನು ಬಂಧಿಸಿ, ಎರಡು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಳಿಕಾವು ಮೂಲದ ಉಮ್ಮಾರ ಎಂಬ ಆರೋಪಿಯ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲಾಗಿದೆ.

ಅಂದಹಾಗೆ ಕೇರಳದಲ್ಲಿ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 4 ರಂದು ಮತ ಎಣಿಕೆ ನಡೆಯಲಿದೆ.

ಶಶಿ ತರೂರ್ ಟ್ವೀಟ್

ಇನ್ನು ಘಟನೆ ಸಂಬಂಧ ಕಾಂಗ್ರೆಸ್ ಸಂಸದ ಶಶಿತರೂರ್ ಟ್ವೀಟ್ ಮಾಡಿದ್ದು, "ನಿನ್ನೆ ರಾತ್ರಿ ನನ್ನ ಭದ್ರತಾ ಸಿಬ್ಬಂದಿ ಮೇಲೆ ನಡೆದ ಅಹಿತಕರ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸುವ ಎಲ್ಲಾ ಸಂದೇಶಗಳು ಮತ್ತು ಕರೆಗಳು ನಿಜವಾಗಿಯೂ ಸ್ಪರ್ಶಿಸಿವೆ. ಅವರು ಚೆನ್ನಾಗಿದ್ದಾರೆ ಮತ್ತು ನಾನು ಯಾವುದೇ ರೀತಿಯಲ್ಲಿ ದಾಳಿ ಮಾಡಿಲ್ಲ. ಎಲ್ಲಾ ಸ್ನೇಹಿತರು ಮತ್ತು ಹಿತೈಷಿಗಳಿಗೆ ಧನ್ಯವಾದಗಳು" ಎಂದು ಸಂಸದರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಘಟನೆಯ ನಂತರ ಬೆಂಗಾವಲು ಪಡೆ ಮುಂದುವರೆದು ಅವರು ಇನ್ನೂ ಎರಡು ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದರು. ನಾವು ನಿನ್ನೆ ಧೈರ್ಯದಿಂದ ಮುಂದುವರೆದೆವು ಮತ್ತು ಯೋಜಿಸಿದಂತೆ ಇನ್ನೂ ಎರಡು ಕಾರ್ಯಕ್ರಮಗಳನ್ನು ಮುಗಿಸಿದೆವು. ಮತ್ತು ನಮ್ಮ ನಡೆಯುತ್ತಿರುವ ಕಾರ್ಯಕ್ರಮವು ಯಾವುದೇ ಪರಿಣಾಮ ಬೀರದೆ ಉಳಿದಿದೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.