ಏಪ್ರಿಲ್ 10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?
ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ, ಪಕ್ಷದ ಹಿರಿಯ ನಾಯಕರು ಹಾಗೂ ಜೆಡಿಯು ನಾಯಕರು ಒಟ್ಟಾಗಿ ಕುಳಿತು ಹೊಸ ಕ್ಯಾಬಿನೆಟ್ ಚರ್ಚೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಸರೋಗಿ ತಿಳಿಸಿದ್ದಾರೆ.

ಪಾಟ್ನಾ: ಹಾಲಿ ಮುಖ್ಯಮಂತ್ರಿ ಮತ್ತು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್, ಇದೇ 10 ರಂದು ಔಪಚಾರಿಕವಾಗಿ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಹಾರದ ಬಿಜೆಪಿ ನಾಯಕ ಸಂಜಯ್ ಸರೋಗಿ ಭಾನುವಾರ ಖಚಿತಪಡಿಸಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ, ಪಕ್ಷದ ಹಿರಿಯ ನಾಯಕರು ಹಾಗೂ ಜೆಡಿಯು ನಾಯಕರು ಒಟ್ಟಾಗಿ ಕುಳಿತು ಹೊಸ ಕ್ಯಾಬಿನೆಟ್ ಚರ್ಚೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಸರೋಗಿ ತಿಳಿಸಿದ್ದಾರೆ.
ಮುಖ್ಯಮಂತ್ರಿ, ಬಿಜೆಪಿ ನಾಯಕರು ಮತ್ತು ಎನ್‌ಡಿಎ ಪಾಲುದಾರರು ಒಟ್ಟಿಗೆ ಕುಳಿತು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಅವರು ಹೇಳಿದರು. ಬಿಹಾರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿರುವಂತೆಯೇ ಈ ಬೆಳವಣಿಗೆಯಾಗಿದೆ.
ರಾಜ್ಯದ ಸುದೀರ್ಘ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಮತ್ತು ಜೆಡಿ-ಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಈ ಹಿಂದೆ ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಮಾರ್ಚ್ 5 ರಂದು ತಮ್ಮ ನಿರ್ಧಾರವನ್ನು ಅವರು ಪ್ರಕಟಿಸಿದ್ದರು.
ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಹಾರ ಉಪಮುಖ್ಯಮಂತ್ರಿ ವಿಜಯ್ ಸಿನ್ಹಾ, ಇದು ಅವರ ಸ್ವಂತ ನಿರ್ಧಾರ. ಮತ್ತೊಂದು ಹುದ್ದೆಗೆ ಪ್ರಮಾಣ ವಚನ ಸ್ವೀಕರಿಸಿದರೆ ಈಗ ಅವರು ಕಾರ್ಯನಿರ್ವಹಿಸುತ್ತಿರುವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದುದು ಸಾಂವಿಧಾನಿಕ ನಿಯಮ ಎಂದಿದ್ದಾರೆ.
ನಿತೀಶ್ ಕುಮಾರ್ ಅವರು ಬಿಹಾರವನ್ನು ಅಭಿವೃದ್ಧಿ ಹೊಂದಿದ ರಾಜ್ಯಗಳ ಪಟ್ಟಿಗೆ ಸೇರಿಸಿದ್ದಾರೆ ಮತ್ತು ಅವರು ತಮ್ಮ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ (ಎಂಎಲ್‌ಸಿ) ರಾಜೀನಾಮೆ ನೀಡಿರುವುದು ರಾಜ್ಯಕ್ಕೆ ನಷ್ಟವಾಗಿದೆ ಎಂದು ಜೆಡಿಯು ಶಾಸಕ ದುಲಾಲ್ ಚಂದ್ರ ಗೋಸ್ವಾಮಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



