ದೇಶ

'ಕಾಂಗ್ರೆಸ್ ನೆರೆಯ ಪಾಕಿಸ್ತಾನದ ಮಾತಿಗೆ ಬೆಂಬಲ ನೀಡುತ್ತಿದೆ, ಇದರಿಂದ ದೇಶದ ಭದ್ರತೆಗೆ ಧಕ್ಕೆ': ಪ್ರಧಾನಿ ಮೋದಿ

ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ದೃಷ್ಟಿಕೋನ ಚಿಕ್ಕದಾಗಿದೆ ಎಂದು ಟೀಕಿಸಿದ ಅವರು, ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ತೊಡಗಿಕೊಳ್ಳಲು ಪ್ರಯತ್ನಿಸುತ್ತಿದೆ. ಆದರೆ ಬಿಜೆಪಿ ಎಲ್ಲಾ ವರ್ಗಗಳ ಸಮಗ್ರ ಅಭಿವೃದ್ಧಿಗೆ ದೂರದೃಷ್ಟಿಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದರು.

'ಕಾಂಗ್ರೆಸ್ ನೆರೆಯ ಪಾಕಿಸ್ತಾನದ ಮಾತಿಗೆ ಬೆಂಬಲ ನೀಡುತ್ತಿದೆ, ಇದರಿಂದ ದೇಶದ ಭದ್ರತೆಗೆ ಧಕ್ಕೆ': ಪ್ರಧಾನಿ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ
Published On :

ಅಸ್ಸಾಂನ ಬರ್ಪೇಟಾ ಜಿಲ್ಲೆಯ ಚುನಾವಣಾ ಪ್ರಚಾರ ಸಭೆಯಲ್ಲಿ ಇಂದು ಸೋಮವಾರ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷ ಪಾಕಿಸ್ತಾನದ ನಿಲುವಿಗೆ ಹೊಂದಾಣಿಕೆ ಮಾಡಿಕೊಂಡಿದೆ ಇಂತಹ ನಿಲುವು ರಾಷ್ಟ್ರದ ಭದ್ರತೆಗೆ ಹಾನಿ ಉಂಟುಮಾಡುತ್ತದೆ ಎಂದು ಹೇಳಿದರು.

ನಮ್ಮ ಸರ್ಕಾರ ಪಾಕಿಸ್ತಾನದಲ್ಲಿನ ಉಗ್ರ ಶಿಬಿರಗಳನ್ನು ಗುರಿಯಾಗಿಸಿಕೊಂಡು ‘ಆಪರೇಶನ್ ಸಿಂದೂರ್’ ನಡೆಸಿದರೆ, ವಿರೋಧ ಪಕ್ಷ ಮಾತ್ರ ಪಕ್ಕದ ದೇಶದ ಧ್ವನಿಗೆ ತಕ್ಕಂತೆ ಮಾತನಾಡುತ್ತಿದೆ. ಈ ಪಾಕಿಸ್ತಾನ ಜೊತೆಗೆ ಸಂಪರ್ಕ ರಾಷ್ಟ್ರ ಭದ್ರತೆಗೆ ಧಕ್ಕೆ ತರುತ್ತದೆ, ಇದಕ್ಕೆ ನಾವು ಎಂದಿಗೂ ಒಪ್ಪಿಗೆ ಕೊಡುವುದಿಲ್ಲ ಎಂದರು.

ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ದೃಷ್ಟಿಕೋನ ಚಿಕ್ಕದಾಗಿದೆ ಎಂದು ಟೀಕಿಸಿದ ಅವರು, ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ತೊಡಗಿಕೊಳ್ಳಲು ಪ್ರಯತ್ನಿಸುತ್ತಿದೆ. ಆದರೆ ಬಿಜೆಪಿ ಎಲ್ಲಾ ವರ್ಗಗಳ ಸಮಗ್ರ ಅಭಿವೃದ್ಧಿಗೆ ದೂರದೃಷ್ಟಿಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದರು.

‘ಒನ್ rank, ಒನ್ ಪೆನ್ಷನ್’ ಯೋಜನೆಯನ್ನು ಜಾರಿಗೆ ತರದೆ ಕಾಂಗ್ರೆಸ್ ಸೈನಿಕರಿಗೆ ಅನ್ಯಾಯ ಮಾಡಿದೆ. ತಮ್ಮ ಸರ್ಕಾರ ಈ ವಿಷಯದಲ್ಲಿ ನ್ಯಾಯ ಒದಗಿಸಿದೆ ಎಂದು ಹೇಳಿದರು.

ಅಸ್ಸಾಂನಲ್ಲಿ ಶಾಂತಿ ಸ್ಥಾಪನೆಗೆ ಬಿಜೆಪಿ ಮಾಡಿದ ಪ್ರಾಮಾಣಿಕ ಪ್ರಯತ್ನಗಳು ಮತ್ತು ಕಳೆದ 10 ವರ್ಷಗಳಲ್ಲಿ ಸಹಿ ಮಾಡಿದ ಶಾಂತಿ ಒಪ್ಪಂದಗಳ ಜಾರಿಗೆ ಕಾರಣವಾಗಿ ಸ್ಥಿರತೆ ಉಂಟಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಶಾಂತಿ ಮತ್ತು ಸ್ಥಿರತೆ ಅಭಿವೃದ್ಧಿಗೆ ದಾರಿ ಮಾಡಿಕೊಟ್ಟಿದೆ. ಇದು ಮುಂದುವರಿಯಲು ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರ ಇಡುವುದು ಅಗತ್ಯ ಎಂದು ಹೇಳಿದರು.

ಮಹಿಳಾ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು, ಸಂಸತ್ತಿನಲ್ಲಿ ಮಹಿಳೆಯರಿಗೆ 33 ಶೇಕಡಾ ಮೀಸಲಾತಿ 2029ರ ಸಾರ್ವತ್ರಿಕ ಚುನಾವಣೆಯಿಂದ ಜಾರಿಗೆ ಬರಲಿದೆ ಎಂದು ಹೇಳಿದರು. ಈ ಮಸೂದೆಯನ್ನು ಎಲ್ಲಾ ಪಕ್ಷಗಳು ಬೆಂಬಲಿಸುವಂತೆ ಒತ್ತಾಯಿಸಲು ಮಹಿಳೆಯರನ್ನು ಅವರು ಮನವಿ ಮಾಡಿದರು.

ಅಸ್ಸಾಂ ರಾಜ್ಯದ 126 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಮತ ಎಣಿಕೆ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.