'BJP, RSS ವಿಷಕಾರಿ ಹಾವುಗಳಂತೆ, ಅವುಗಳನ್ನು ಹೊಡೆದು ಕೊಲ್ಲಬೇಕು': ವಿವಾದ ಹುಟ್ಟುಹಾಕಿದ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ; Video
ಅಸ್ಸಾಂನ ನಿಲಾಂಬಜಾರ್‌ನಲ್ಲಿ ಭಾನುವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅಸ್ಸಾಂನ ನಿಲಾಂಬಜಾರ್‌ನಲ್ಲಿ ಭಾನುವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಾರ್ಥನೆಯ ಸಮಯದಲ್ಲೂ ಕಾಣಿಸಿಕೊಳ್ಳುವ ವಿಷಕಾರಿ ಹಾವನ್ನು ಕೊಲ್ಲಬೇಕು ಎಂದು ಕುರಾನ್ ಹೇಳುತ್ತದೆ ಎಂದು ಉಲ್ಲೇಖಿಸಿ, ಆರ್‌ಎಸ್‌ಎಸ್ ಮತ್ತು ಬಿಜೆಪಿ ಅದೇ ರೀತಿಯ ಹಾವುಗಳಾಗಿವೆ; ಅವುಗಳನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ ಎಂದು ಹೇಳಿದರು.
ಸೋಷಿಯಲ್ ಮೀಡಿಯಾದಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ತೀವ್ರ ಟ್ರೋಲ್ ಮಾಡಿದ್ದು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ ವಿರುದ್ಧ ಬಹಿರಂಗವಾಗಿ ಮಲ್ಲಿಕಾರ್ಜುನ ಖರ್ಗೆ ಹಿಂಸೆಗೆ ಪ್ರಚೋದನೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಖರ್ಗೆಯವರು ಭಾಷಣದಲ್ಲಿ ಹೇಳಿದ್ದೇನು?
ಖರ್ಗೆ ಅವರು, ಕುರಾನ್‌ನಲ್ಲಿ ನಮಾಜ್ ಮಾಡುವಾಗಲೂ ವಿಷಕಾರಿ ಹಾವನ್ನು ಕಂಡರೆ ಅದನ್ನು ಕೊಲ್ಲಬೇಕು ಎಂದು ಹೇಳಲಾಗಿದೆ. ಆರ್‌ಎಸ್‌ಎಸ್/ಬಿಜೆಪಿ ಕೂಡ ಅದೇ ರೀತಿಯ ಹಾವು, ನೀವು ಅವರನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ ಎಂದು ಹೇಳಿದ್ದರು.
ಕೆಲವರು ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹಿಸಿದ್ದಾರೆ. ಬಿಜೆಪಿ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದೆ. ಆರ್‌ಎಸ್‌ಎಸ್ ಮತ್ತು ಬಿಜೆಪಿ ಯನ್ನು ವಿಷಕಾರಿ ಹಾವಿಗೆ ಹೋಲಿಸಿದ್ದಕ್ಕಾಗಿ, ಪಕ್ಷದ ವಕ್ತಾರ ಶೆಹಜಾದ್ ಪೂನವಾಲಾ ಕಾಂಗ್ರೆಸ್ ಮೇಲೆ ಹಿಂಸೆಗೆ ಪ್ರೇರೇಪಿಸುತ್ತಿದೆ ಎಂದು ಆರೋಪಿಸಿದರು.
ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಪೂನಾವಾಲ್ಲಾ, ಕಾಂಗ್ರೆಸ್ ಹೊಸ ತಳಮಟ್ಟಕ್ಕೆ ಇಳಿದಿದೆ ಎಂದು ಆರೋಪಿಸಿ, ಬಿಜೆಪಿ ಮತ್ತು ಆರ್‌ಎಸ್‌ಎಸ್ ಸದಸ್ಯರ ವಿರುದ್ಧ ಮುಸ್ಲಿಮರನ್ನು ಪ್ರಚೋದಿಸುತ್ತಿದೆ ಎಂದು ಹೇಳಿದರು.
ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿದ ಅವರು, ಕಾಂಗ್ರೆಸ್ “ಇಂಡಿಯನ್ ಜಿಹಾದಿ ಕಾಂಗ್ರೆಸ್” ತರಹ ವರ್ತಿಸುತ್ತಿದೆ ಎಂದು ಟೀಕಿಸಿ, ಈ ಹೇಳಿಕೆ ರಾಜಕೀಯ ವಿರೋಧಿಗಳ ವಿರುದ್ಧ ಪ್ರಚೋದನೆಗೆ ಸಮಾನವಾಗಿದೆ ಎಂದು ಹೇಳಿದರು. ಖರ್ಗೆ ಅವರ ಹೇಳಿಕೆಯನ್ನು ಉಲ್ಲೇಖಿಸಿ, ಪ್ರಾರ್ಥನೆಯ ಸಮಯದಲ್ಲೂ ವಿಷಕಾರಿ ಹಾವನ್ನು ಕೊಲ್ಲಬೇಕೆಂಬ ಸಾಲನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಹೋಲಿಸಿರುವುದು ಅಪಾಯಕಾರಿಯೂ, ಪ್ರಜಾಸತ್ತಾತ್ಮಕವಲ್ಲದದ್ದೂ ಆಗಿದೆ ಎಂದು ಆರೋಪಿಸಿದರು.
ಇದು ಕಾಂಗ್ರೆಸ್‌ನ ಅತ್ಯಂತ ಕೆಳಮಟ್ಟ. ಇದು ಅತೀ ಅಪ್ರಜಾಸತ್ತಾತ್ಮಕ, ತುರ್ತು ಪರಿಸ್ಥಿತಿ ಮನೋಭಾವದ ಹೇಳಿಕೆ. ಚುನಾವಣಾ ಆಯೋಗವು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಟೀಕಿಸಿದ್ದಾರೆ.

ಗುಜರಾತ್ ಜನರು ಅನಕ್ಷರಸ್ಥರು..; ಮೋದಿ, ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸಿದ್ದಾರೆ: Mallikarjun Kharge
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


