Video Viral: ಬಾಬಾ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ; ನಡು ರಸ್ತೆಯಲ್ಲೇ ಅಳುತ್ತಾ ಸಹಾಯಕ್ಕಾಗಿ ಅಂಗಲಾಚಿದ 17 ವರ್ಷದ ಬಾಲಕಿ!
ಒಡಿಶಾ ಮೂಲದ ‘ಬಾಬಾ’ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿ ಆರೋಪಿಸಿದ್ದು, ರಸ್ತೆಯ ಬದಿಯಲ್ಲಿ ಅಳುತ್ತಾ, ತನಗೆ ಸಹಾಯ ಮಾಡುವಂತೆ ದಾರಿಹೋಕರನ್ನು ಕೇಳುತ್ತಿದ್ದಾಳೆ.

ಮಥುರಾ: ಉತ್ತರ ಪ್ರದೇಶದ ಮಥುರಾದಲ್ಲಿ 17 ವರ್ಷದ ಬಾಲಕಿಯೊಬ್ಬಳು, ಸ್ಥಳೀಯ "ಬಾಬಾ" ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿ, ನಡು ರಸ್ತೆಯಲ್ಲೇ ಸಹಾಯಕ್ಕಾಗಿ ಅಂಗಲಾಚುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಒಡಿಶಾ ಮೂಲದ ‘ಬಾಬಾ’ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿ ಆರೋಪಿಸಿದ್ದು, ರಸ್ತೆಯ ಬದಿಯಲ್ಲಿ ಅಳುತ್ತಾ, ತನಗೆ ಸಹಾಯ ಮಾಡುವಂತೆ ದಾರಿಹೋಕರನ್ನು ಕೇಳುತ್ತಿದ್ದಾಳೆ. ಈ ಘಟನೆಯು ಸ್ಥಳೀಯವಾಗಿ ಭಾರಿ ಸಂಚಲನ ಮೂಡಿಸಿದೆ.
ವರದಿಗಳ ಪ್ರಕಾರ, ತಾನು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದಾಗಿ ಅಳುತ್ತಲೇ ಅಲ್ಲಿನ ಜನರಿಗೆ ವಿವರಿಸಿದ್ದಾಳೆ. ತಕ್ಷಣವೇ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿ ವೈದ್ಯಕೀಯ ತಪಾಸಣೆಗೆ ಕಳುಹಿಸಿದ್ದಾರೆ.
ಈ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ‘ಬಾಬಾ’ನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದ್ದು, ಘಟನೆ ನಡೆದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
“ಯಾರೇ ಆಗಿದ್ದರೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು,” ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



