ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ: ಪಾಪದ ವಿಶ್ವಗುರು.. ಸಂಘಿಗಳೇ.. ಇದನ್ನು ನೀವು ಹೇಗೆ ಜೀರ್ಣಿಸಿಕೊಳ್ಳುತ್ತೀರಿ? ಮೋದಿ ಕಿಚಾಯಿಸಿದ DMK
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಮೇಲಿನ ದಾಳಿಯನ್ನು ಸ್ಥಗಿತಗೊಳಿಸಿ, ಎರಡು ವಾರಗಳ ದ್ವಿಪಕ್ಷೀಯ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ರಾಜತಿ ಸಲ್ಮಾ ಪ್ರತಿಕ್ರಿಯಿಸಿದ್ದಾರೆ.

ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವ ಕುರಿತು ಡಿಎಂಕೆ ರಾಜ್ಯಸಭಾ ಸಂಸದೆ ರಾಜತಿ ಸಲ್ಮಾ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.
ಪಾಕಿಸ್ತಾನದ ಮಧ್ಯಸ್ಥಿಕೆಯಿಂದಾಗಿ ಅಮೆರಿಕ–ಇರಾನ್ ಯುದ್ಧ ಸ್ಥಗಿತಗೊಂಡು ಕದನ ವಿರಾಮ ಘೋಷಿಸಲಾಗಿದೆ. ಪಾಪದ ವಿಶ್ವಗುರು. ಸಂಘಿಗಳೇ... ಇದನ್ನು ನೀವು ಹೇಗೆ ಜೀರ್ಣಿಸಿಕೊಳ್ಳುತ್ತೀರಿ? ಎಂದು ಸಲ್ಮಾ ‘ಎಕ್ಸ್’ನಲ್ಲಿ ಪೋಸ್ಟ್ ನಲ್ಲಿ ಲೇವಡಿ ಮಾಡಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಮೇಲಿನ ದಾಳಿಯನ್ನು ಸ್ಥಗಿತಗೊಳಿಸಿ, ಎರಡು ವಾರಗಳ ದ್ವಿಪಕ್ಷೀಯ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ರಾಜತಿ ಸಲ್ಮಾ ಪ್ರತಿಕ್ರಿಯಿಸಿದ್ದಾರೆ.
ಇರಾನ್ ಕೂಡ ಟ್ರಂಪ್ ಅವರ ಶಾಂತಿ ಪ್ರಸ್ತಾವನೆಯನ್ನು ಒಪ್ಪಿಕೊಂಡಿದ್ದು, ಹೊರ್ಮುಜ್ ಜಲಸಂಧಿಯಲ್ಲಿ ಸಂಚಾರಕ್ಕೆ ಅವಕಾಶ ನೀಡಲು ಸಮ್ಮತಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


