ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ಪ್ರಧಾನಿ ಮೋದಿ-ರಾಹುಲ್ ಗಾಂಧಿ ಅಪರೂಪದ ಮುಖಾಮುಖಿ! Video
ಪ್ರಧಾನಿ ನರೇಂದ್ರ ಮೋದಿ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವಿನ ಸಾರ್ವಜನಿಕ, ಸೌಹಾರ್ದಯುತ ಸಂಭಾಷಣೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ನವದೆಹಲಿ: ದೆಹಲಿಯ ಸಂಸತ್ ಭವನದ ಆವರಣ ಇಂದು ಅಪರೂಪದ ದೃಶ್ಯಕ್ಕೆ ಸಾಕ್ಷಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪರಸ್ಪರ ಮುಖಾಮುಖಿಯಾಗಿ ಮಾತುಕತೆ ನಡೆಸಿದರು.
ಹೌದು.. ಭಾರತದ ಪ್ರಸ್ತುತ ಧ್ರುವೀಕೃತ ರಾಜಕೀಯದಲ್ಲಿ ಅಪರೂಪ ಎಂಬಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವಿನ ಸಾರ್ವಜನಿಕ, ಸೌಹಾರ್ದಯುತ ಸಂಭಾಷಣೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಸಮಾಜ ಸುಧಾರಕ ಮಹಾತ್ಮ ಜ್ಯೋತಿರಾವ್ ಫುಲೆ ಅವರ 200 ನೇ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಲು ಶನಿವಾರ ಸಂಸತ್ ಸಂಕೀರ್ಣದಲ್ಲಿ ನೆರೆದಿದ್ದ ನಾಯಕರಲ್ಲಿ ಪ್ರಧಾನಿ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೂಡ ಉಪಸ್ಥಿತರಿದ್ದರು.
ಪ್ರಧಾನಿ ಮೋದಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಅರ್ಜುನ್ ರಾಮ್ ಮೇಘವಾಲ್, ರಾಹುಲ್ ಗಾಂಧಿ ಮತ್ತು ಇತರರನ್ನು ಅಭಿನಂದಿಸಿದ್ದು, ನಂತರ ವಿರೋಧ ಪಕ್ಷದ ನಾಯಕರೊಂದಿಗೆ ಮಾತನಾಡಲು ನಿಂತಿದ್ದನ್ನು ವೀಡಿಯೊದಲ್ಲಿ ತೋರಿಸಲಾಗಿದೆ.
ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ರಾಹುಲ್ ಗಾಂಧಿ ಅವರ ತಾಯಿ ಮತ್ತು ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಆರೋಗ್ಯದ ಬಗ್ಗೆ ಪ್ರಧಾನಿ ಮೋದಿ ರಾಹುಲ್ ಗಾಂಧಿಯವರನ್ನು ಕೇಳಿದರು ಎಂದು ಮೂಲಗಳು ತಿಳಿಸಿವೆ.
ಈ ವೇಳೆ ರಾಹುಲ್ ಗಾಂಧಿ 'ಸೋನಿಯಾ ಅವರ ಆರೋಗ್ಯ ಸುಧಾರಿಸುತ್ತಿದೆ ಎಂದು ಅವರಿಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಪ್ರಧಾನಿ ತೃಪ್ತಿ ವ್ಯಕ್ತಪಡಿಸಿದರು ಮತ್ತು ಶುಭಾಶಯಗಳನ್ನು ವ್ಯಕ್ತಪಡಿಸಿದರು" ಎಂದು ಹೇಳಲಾಗಿದೆ.
ಅಂದಹಾಗೆ ಸೋನಿಯಾ ಗಾಂಧಿ ಅವರು ಸೋಂಕಿನಿಂದ ಬಳಲುತ್ತಿದ್ದು, ಜ್ವರದ ಕಾರಣದಿಂದಾಗಿ ಮಾರ್ಚ್ 24 ರಂದು ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಮಾರ್ಚ್ 31ರಂದು ಅವರು ಚೇತರಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



