234 ಕ್ಷೇತ್ರಗಳಲ್ಲೂ DMK ಮೈತ್ರಿಕೂಟ ಗೆಲುವು; ಯಾರೇ ಬಂದರೂ ನಮಗೆ ಚಿಂತೆಯಿಲ್ಲ: ವಿಜಯ್ ರಾಜಕೀಯ ಪ್ರವೇಶದ ಬಗ್ಗೆ ಸ್ಟಾಲಿನ್ ಮಾತು!
ಡಿಎಂಕೆ ಯಾವುದೇ ಸವಾಲನ್ನು ಎದುರಿಸಲು ಸಿದ್ಧವಾಗಿದೆ. ಪಕ್ಷವು ಚಿಂತಿಸುತ್ತಿಲ್ಲ. ಸಾರ್ವಜನಿಕರು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸುತ್ತಾರೆ. ಹಾಗೂ ಶೀಘ್ರದಲ್ಲೇ ಬದಲಾಗುತ್ತಾರೆ ಎಂದು ಹೇಳಿದ್ದಾರೆ.

ಚೆನ್ನೈ: ಯಾರೇ ಬಂದರೂ ಅವರನ್ನು ಎದುರಿಸುತ್ತೇವೆ, ನಮಗೆ ಯಾವುದೇ ಚಿಂತೆ ಇಲ್ಲ ಎಂದು ನಟ ದಳಪತಿ ವಿಜಯ್ ಅವರ ರಾಜಕೀಯ ಪ್ರವೇಶದ ಬಗ್ಗೆ ಇದೇ ಮೊದಲ ಬಾರಿಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಡಿಎಂಕೆ ಯಾವುದೇ ಸವಾಲನ್ನು ಎದುರಿಸಲು ಸಿದ್ಧವಾಗಿದೆ. ಪಕ್ಷವು ಚಿಂತಿಸುತ್ತಿಲ್ಲ. ಸಾರ್ವಜನಿಕರು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸುತ್ತಾರೆ. ಹಾಗೂ ಶೀಘ್ರದಲ್ಲೇ ಬದಲಾಗುತ್ತಾರೆ ಎಂದು ಹೇಳಿದ್ದಾರೆ.
234 ಕ್ಷೇತ್ರಗಳಲ್ಲೂ ಡಿಎಂಕೆ ಮೈತ್ರಿಕೂಟ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಅವರು, ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರ ಇತ್ತೀಚಿನ ಹೇಳಿಕೆಗಳು ಹತಾಶೆ ಮತ್ತು ಸೋಲಿನ ಭಯವನ್ನು ಪ್ರತಿಬಿಂಬಿಸುತ್ತವೆ. ದ್ರಾವಿಡ ಪಕ್ಷವೊಂದು ದೆಹಲಿಯಿಂದ ನಿಯಂತ್ರಿಸಲ್ಪಡುತ್ತಿರುವುದು ಆತಂಕಕಾರಿ ಎಂದು ಎಐಎಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ತಮಿಳುನಾಡು ವಿಧಾನಸಭಾ ಚುನಾವಣೆ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 4 ರಂದು ಎಣಿಕೆ ನಡೆಯಲಿದೆ. ಡಿಎಂಕೆ ನೇತೃತ್ವದ ಕಾಂಗ್ರೆಸ್, ಡಿಎಂಡಿಕೆ ಹಾಗೂ ವಿಸಿಕೆ ಸೇರಿ ಎಡಪಕ್ಷಗಳ ಇಂಡಿಯಾ ಒಕ್ಕೂಟ ಮತ್ತು ಎಐಎಡಿಎಂಕೆ ನೇತೃತ್ವದ ಬಿಜೆಪಿ, ಪಿಎಂಕೆ ಎನ್ಡಿಎ ಒಕ್ಕೂಟದ ನಡುವೆ ನೇರ ಸ್ಪರ್ಧೆ ನಡೆಯಲಿದೆ. ಹಾಗೆ ಇದೇ ಮೊದಲ ಬಾರಿಗೆ ನಟ ವಿಜಯ್ ಅವರ ಟಿವಿಕೆ ಕೂಡ ಚೊಚ್ಚಲ ಚುನಾವಣೆ ರಾಜಕೀಯ ಪ್ರವೇಶ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



