ಹಣಕ್ಕಾಗಿ ಪ್ರಧಾನಿ ಮೋದಿ ಭದ್ರತೆಯ ಮಾಹಿತಿ ವಿದೇಶಿ ಏಜೆನ್ಸಿಗೆ ರವಾನೆ: ಬಿಹಾರದ ವ್ಯಕ್ತಿಯ ಬಂಧನ!
ತಿವಾರಿ ಯುಎಸ್ ಮೂಲದ ಗುಪ್ತಚರ ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಸಂದೇಶ ಕಳುಹಿಸಿದ್ದು, ಪ್ರಧಾನಿ ಭದ್ರತೆಗೆ ಧಕ್ಕೆ ತಂದಿದ್ದಕ್ಕಾಗಿ ಹಣವನ್ನು ಕೇಳಿದಾನೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಪಾಟ್ನಾ: ವಿದೇಶಿ ಗುಪ್ತಚರ ಸಂಸ್ಥೆಯ ವೆಬ್‌ಸೈಟ್ ವೊಂದಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಗೆ ಧಕ್ಕೆ ತರುವಂತಹ ಬೆದರಿಕೆ ಸಂದೇಶ ಕಳುಹಿಸಿದ ಆರೋಪದ ಮೇಲೆ ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಮ್ರಿ ಮೂಲದ ಅಮಲ್ ಕುಮಾರ್ ತಿವಾರಿ ಎಂಬ ಆರೋಪಿಯನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಬಂಧಿತ ಆರೋಪಿಯ ಮನೆಯಿಂದ ಲ್ಯಾಪ್‌ಟಾಪ್, ಮೊಬೈಲ್ ಫೋನ್‌ಗಳು ಮತ್ತು ಇತರ ಡಿಜಿಟಲ್ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ.
ತಿವಾರಿ ಯುಎಸ್ ಮೂಲದ ಗುಪ್ತಚರ ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಸಂದೇಶ ಕಳುಹಿಸಿದ್ದು, ಪ್ರಧಾನಿ ಭದ್ರತೆಗೆ ಧಕ್ಕೆ ತಂದಿದ್ದಕ್ಕಾಗಿ ಹಣವನ್ನು ಕೇಳಿದಾನೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಆರೋಪಿಯಿಂದ ವಶಕ್ಕೆ ಪಡೆದ ಮೊಬೈಲ್ ಫೋನ್‌ನಲ್ಲಿ, ಬಹು ವರ್ಚುವಲ್ ಖಾಸಗಿ ನೆಟ್‌ವರ್ಕ್‌ಗಳು (VPN)ಮತ್ತು ಕೆಲವು ಅಪ್ಲಿಕೇಶನ್‌ಗಳು ಪತ್ತೆಯಾಗಿವೆ. ಇವುಗಳನ್ನು ಡಾರ್ಕ್ ವೆಬ್ ಪ್ರವೇಶಿಸಲು ಬಳಸಲಾಗುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.
ವಿಚಾರಣೆ ವೇಳೆ ತಿವಾರಿ ಘಟನೆಯಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ಕೋಲ್ಕತ್ತಾ ವಿಮಾನ ನಿಲ್ದಾಣದ ವೆಬ್‌ಸೈಟ್ ಹ್ಯಾಕ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಅವರನ್ನು ಪೊಲೀಸರು ಮತ್ತು ಕೇಂದ್ರೀಯ ಸಂಸ್ಥೆಗಳು ವಿಚಾರಣೆ ನಡೆಸುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



