ದೇಶ

PM Modi-Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ; ವಿಡಿಯೋ ವೈರಲ್!

ಸಂಸತ್ ಆವರಣದಲ್ಲಿ ಸಮಾಜ ಸುಧಾರಕ ಮಹಾತ್ಮ ಜ್ಯೋತಿರಾವ್ ಫುಲೆ ಅವರ 200ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವಾಗ ಈ ಅಪರೂಪದ ಘಟನೆ ನಡೆದಿದೆ.

PM Modi-Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ; ವಿಡಿಯೋ ವೈರಲ್!
ರಾಹುಲ್ ಗಾಂಧಿ ಜೊತೆಗೆ ಪ್ರಧಾನಿ ಮೋದಿ ಮಾತನಾಡುತ್ತಿರುವ ಚಿತ್ರ
Published On :

ನವದೆಹಲಿ: ರಾಜಕೀಯ ಬದ್ಧ ವೈರಿಗಳಾಗಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವಿನ ಸಾರ್ವಜನಿಕ, ಸೌಹಾರ್ದಯುತ ಚುಟುಕು ಮಾತುಕತೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ

ಹೌದು. ಸಂಸತ್ ಆವರಣದಲ್ಲಿ ಸಮಾಜ ಸುಧಾರಕ ಮಹಾತ್ಮ ಜ್ಯೋತಿರಾವ್ ಫುಲೆ ಅವರ 200ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವಾಗ ಈ ಅಪರೂಪದ ಘಟನೆ ನಡೆದಿದೆ.

ಪ್ರಧಾನಿ ಮೋದಿ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಅರ್ಜುನ್ ರಾಮ್ ಮೇಘವಾಲ್, ರಾಹುಲ್ ಗಾಂಧಿ ಮತ್ತಿತರಿಗೆ ಸ್ವಾಗತ ಕೋರಿದ ಬಳಿಕ ರಾಹುಲ್ ಗಾಂಧಿ ಅವರೊಂದಿಗೆ ಕಿರು ಮಾತುಕತೆ ನಡೆಸುವುದು ವಿಡಿಯೋದಲ್ಲಿದೆ.

ಇತ್ತೀಚೆಗಷ್ಟೇ ಆಸ್ಪತ್ರೆಗೆ ದಾಖಲಾಗಿದ್ದ ಅವರ ತಾಯಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯದ ಬಗ್ಗೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಅವರನ್ನು ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಗ ಸೋನಿಯಾ ಗಾಂಧಿ ಅವರ ಆರೋಗ್ಯ ಸುಧಾರಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದು, ಸೋನಿಯಾ ಗಾಂಧಿ ಆರೋಗ್ಯ ಸುಧಾರಣೆಗೆ ಪ್ರಧಾನಿ ಮೋದಿ ಶುಭ ಕೋರಿದ್ದಾರೆ ಎನ್ನಲಾಗಿದೆ.

ಜ್ವರದ ಕಾರಣದಿಂದ ಮಾರ್ಚ್ 24 ರಂದು ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾ ಗಾಂಧಿ ಮಾರ್ಚ್ 31 ರಂದು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.