ದೇಶ

ನವದೆಹಲಿ: ಸಂಪುಟ ಪುನರ್ ರಚನೆಗೆ ಪಟ್ಟು, ಹಿರಿಯ ನಾಯಕರೊಂದಿಗೆ ಚರ್ಚಿಸದೆ ಬೆಂಗಳೂರಿಗೆ ವಾಪಸ್ ಆಗಲ್ಲ; ಅಶೋಕ್ ಪಟ್ಟಣ್

ಸುದ್ದಿಗಾರರೊಂದಿಗೆ ಮಾತನಾಡಿದ ಹಿರಿಯ ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಒಪ್ಪಿಗೆ ಪಡೆದು ದೆಹಲಿಗೆ ಬಂದಿದ್ದು, ಮತ್ತಷ್ಟು ಶಾಸಕರು ದೆಹಲಿಗೆ ಬರುವ ಸಾಧ್ಯತೆಯಿದೆ ಎಂದು ತಿಳಿಸಿದರು.

ನವದೆಹಲಿ: ಸಂಪುಟ ಪುನರ್ ರಚನೆಗೆ ಪಟ್ಟು, ಹಿರಿಯ ನಾಯಕರೊಂದಿಗೆ ಚರ್ಚಿಸದೆ ಬೆಂಗಳೂರಿಗೆ ವಾಪಸ್ ಆಗಲ್ಲ; ಅಶೋಕ್ ಪಟ್ಟಣ್
ನವದೆಹಲಿಯಲ್ಲಿ ಕಾಂಗ್ರೆಸ್ ಶಾಸಕರು
Published On :

ನವದೆಹಲಿ/ಕೊಪ್ಪಳ: ಸಚಿವ ಸ್ಥಾನದ ಮೇಲೆ ಕಣ್ಣಿಟ್ಟು ದೆಹಲಿಗೆ ತೆರಳಿರುವ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಮೇ 15ರೊಳಗೆ ಸಂಪುಟ ಪುನರ್ ರಚನೆ ಪ್ರಕ್ರಿಯೆ ನಡೆಸಬೇಕು ಎಂದು ಪಟ್ಟು ಹಿಡಿದಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿಯಾಗದೆ ಕರ್ನಾಟಕಕ್ಕೆ ವಾಪಸ್ ಆಗಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿರಿಯ ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಒಪ್ಪಿಗೆ ಪಡೆದು ದೆಹಲಿಗೆ ಬಂದಿದ್ದು, ಮತ್ತಷ್ಟು ಶಾಸಕರು ದೆಹಲಿಗೆ ಬರುವ ಸಾಧ್ಯತೆಯಿದೆ. ನಾಳೆ ವೇಣುಗೋಪಾಲ್ ಅವರನ್ನು ಭೇಟಿಯಾಗದೆ ಬೆಂಗಳೂರಿಗೆ ವಾಪಸ್ ಆಗಲ್ಲ ಎಂದು ತಿಳಿಸಿದರು.

ಈ ಮಧ್ಯೆ ಕೊಪ್ಪಳದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೂ ಆದ ಶಾಸಕ ಬಸವರಾಜ ರಾಯರೆಡ್ಡಿ, 25 ಸಚಿವರನ್ನು ತೆಗೆದು ಹೊಸಬರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಹೊಸಬರಿಗೆ ಅವಕಾಶ ಕೊಟ್ಟರೆ ಅವರಿಗೂ ಅನುಭವವಾಗುತ್ತದೆ. ಇರುವವರೇ ಕಾಯಂ ಆಗಿ ಇರಬೇಕು ಎಂದರೆ ಹೇಗೆ ಸಾಧ್ಯವಾಗುತ್ತದೆ. ಹೊಸಬರು ಅವಕಾಶ ಕೇಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ನಾನು ಹೆಚ್ಚು ಬಾರಿ ಗೆದ್ದು ಶಾಸಕನಾಗಿದ್ದರೂ ಸಚಿವ ಸ್ಥಾನ ಕೊಟ್ಟಿಲ್ಲ. ಆರ್ಥಿಕ ಸಲಹೆಗಾರ ಹುದ್ದೆ ಕೊಟ್ಟಿದ್ದಾರೆ. ಆದರೆ ಈ ಹುದ್ದೆಯಿಂದ ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ ಉತ್ತಮ ಬಜೆಟ್ ಕೊಡಬಹುದೇ ವಿನ: ಯಾವುದೇ ಅಧಿಕಾರ ಇರಲ್ಲ ಎಂದು ನಿರಾಸೆ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.