ದೇಶ

ಛತ್ತೀಸ್‌ಗಢ ವಿದ್ಯುತ್ ಸ್ಥಾವರದಲ್ಲಿ ಭಾರೀ ಸ್ಫೋಟ: 10 ಮಂದಿ ಸಾವು, 25 ಜನರಿಗೆ ಗಾಯ

"ದುರಂತದಲ್ಲಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ" ಎಂದು ಶಕ್ತಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಪ್ರಫುಲ್ ಠಾಕೂರ್ ಹೇಳಿದ್ದಾರೆ.

ಛತ್ತೀಸ್‌ಗಢ ವಿದ್ಯುತ್ ಸ್ಥಾವರದಲ್ಲಿ ಭಾರೀ ಸ್ಫೋಟ: 10 ಮಂದಿ ಸಾವು, 25 ಜನರಿಗೆ ಗಾಯ
ವಿದ್ಯುತ್ ಸ್ಥಾವರದಲ್ಲಿ ಭಾರೀ ಸ್ಫೋಟ
Published On :

ಶಕ್ತಿ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಮಂಗಳವಾರ ಭಾರೀ ಸ್ಫೋಟ ಸಂಭವಿಸಿದ್ದು, ಭೀಕರ ದುರಂತದಲ್ಲಿ 10 ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು 25 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯುತ್ ಸ್ಥಾವರದಲ್ಲಿ ಇನ್ನೂ ಕೆಲವು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಸಿಂಘಿತರೈ ಗ್ರಾಮದಲ್ಲಿರುವ ವೇದಾಂತ ಲಿಮಿಟೆಡ್ ವಿದ್ಯುತ್ ಸ್ಥಾವರದ ಬಾಯ್ಲರ್ ಟ್ಯೂಬ್‌ನಲ್ಲಿ ಇಂದು ಮಧ್ಯಾಹ್ನ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ದುರಂತದಲ್ಲಿ 10 ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 25 ಮಂದಿ ಗಾಯಗೊಂಡಿದ್ದಾರೆ" ಎಂದು ಶಕ್ತಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಪ್ರಫುಲ್ ಠಾಕೂರ್ ಹೇಳಿದ್ದಾರೆ.

ಮಾಹಿತಿ ಪಡೆದ ಕೂಡಲೇ ಸ್ಥಳೀಯ ಆಡಳಿತ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.