CBSE 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ: ಎಂದಿನಂತೆ ಬಾಲಕಿಯರೇ ಮೇಲುಗೈ; ಯಾವ ನಗರಕ್ಕೆ ಮೊದಲ ಸ್ಥಾನ?
ಈ ವರ್ಷ ಫೆಬ್ರವರಿ 17 ರಿಂದ ಮಾರ್ಚ್ 11 ರವರೆಗೆ ನಡೆದ CBSE 10ನೇ ತರಗತಿ ಪರೀಕ್ಷೆಗೆ ಸುಮಾರು 25 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(CBSE)ಯು ಬುಧವಾರ 2025 - 2026ನೇ ಸಾಲಿನ 10ನೇ ತರಗತಿಯ ಬೋರ್ಡ್ ಪರೀಕ್ಷೆಯ(ಸೆಷನ್ 1) ಫಲಿತಾಂಶ ಪ್ರಕಟಿಸಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಈ ವರ್ಷ ಫೆಬ್ರವರಿ 17 ರಿಂದ ಮಾರ್ಚ್ 11 ರವರೆಗೆ ನಡೆದ CBSE 10ನೇ ತರಗತಿ ಪರೀಕ್ಷೆಗೆ ಸುಮಾರು 25 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ವರ್ಷ ಒಟ್ಟಾರೆ ಶೇ. 93.70 ವಿದ್ಯಾರ್ಥಿಗಳ ಪಾಸ್ ಆಗಿದ್ದಾರೆ. ಇದು ಕಳೆದ ವರ್ಷದ ಶೇ 93.66 ಕ್ಕಿಂತ ಸ್ವಲ್ಪ ಸುಧಾರಣೆಯಾಗಿದೆ.
ಹುಡುಗಿಯರು, ಹುಡುಗರಿಗಿಂತ ಹೆಚ್ಚು ಅಂದರೆ ಶೇ 94.99 ರಷ್ಟು ಉತ್ತೀರ್ಣರಾಗಿದ್ದು, ಹುಡುಗರು ಶೇ 92.6 ರಷ್ಟು ಉತ್ತೀರ್ಣರಾಗಿದ್ದಾರೆ.
"ಒಟ್ಟು 55,368 ವಿದ್ಯಾರ್ಥಿಗಳು ಶೇ. 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ ಮತ್ತು 22,157 ವಿದ್ಯಾರ್ಥಿಗಳು ಶೇ. 90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ" ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ತಿರುವನಂತಪುರಂ ಮತ್ತು ವಿಜಯವಾಡ ಶೇ. 99.79 ರಷ್ಟು ಉತ್ತೀರ್ಣತೆಯನ್ನು ದಾಖಲಿಸುವ ಮೂಲಕ ದಕ್ಷಿಣ ಭಾರತದ ರಾಜ್ಯಗಳಲ್ಲೇ ಅಗ್ರಸ್ಥಾನದಲ್ಲಿವೆ. ಚೆನ್ನೈ ಶೇ.99.58 ರಷ್ಟು ಉತ್ತೀರ್ಣರಾಗಿದ್ದರೆ, ಬೆಂಗಳೂರು ಶೇ.98.91 ರಷ್ಟು ಫಲಿತಾಂಶದೊಂದಿಗೆ ಅಗ್ರಸ್ಥಾನದಲ್ಲಿದೆ.
ವಿದ್ಯಾರ್ಥಿಗಳು ಉತ್ತೀರ್ಣರಾಗಲು ಕನಿಷ್ಠ ಶೇ.33 ರಷ್ಟು ಅಂಕಗಳನ್ನು ಪಡೆಯಬೇಕು. ಶೇ.33 ರಷ್ಟು ಅಂಕಗಳನ್ನು ಗಳಿಸದವರಿಗೆ ಕಂಪಾರ್ಟ್‌ಮೆಂಟ್ ಪರೀಕ್ಷೆಯಲ್ಲಿ ಮತ್ತೊಂದು ಅವಕಾಶ ನೀಡಲಾಗುವುದು.
ಕಳೆದ ವರ್ಷಕ್ಕಿಂತ ಸ್ವಲ್ಪ ಸುಧಾರಣೆಯಾಗಿ ಈ ವರ್ಷ 1.47 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು 'ಕಂಪಾರ್ಟ್‌ಮೆಂಟ್' ವಿಭಾಗದಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಸಿಬಿಎಸ್‌ಇಯ ಅಧಿಕೃತ ವೆಬ್‌ಸೈಟ್‌ಗಳಾದ cbse.gov.in ಮತ್ತು results.cbse.nic.in ನಲ್ಲಿ ಪಡೆಯಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



