'ಲವ್ ಜಿಹಾದ್' ಪ್ರಕರಣ: ಮುನ್ನೆಚ್ಚರಿಕೆ ಕ್ರಮವಾಗಿ TCS ನಾಸಿಕ್ ಕಚೇರಿಯ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ!
ಉದ್ಯೋಗಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ದೃಢಪಡಿಸಿವೆ.

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ ಕಾರ್ಪೊರೇಟ್ ಜಿಹಾದ್ ಮತ್ತು ಲೈಂಗಿಕ ಕಿರುಕುಳ ಪ್ರಕರಣದ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ಮನೆಯಿಂದಲೇ ಕೆಲಸ ಮಾಡುವಂತೆ ಎಲ್ಲಾ ಉದ್ದೋಗಿಗಳಿಗೆ ಸೂಚಿಸಿದೆ.
ನಾಸಿಕ್ ಕಚೇರಿಯ ಉದ್ಯೋಗಿಗಳಿಗೆ ಅನುಕೂಲ ಮತ್ತು ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮನೆಯಿಂದಲೇ ಕೆಲಸ ಮಾಡುವಂತೆ ಉದ್ಯೋಗಿಗಳಿಗೆ ಟಿಸಿಎಸ್ ಸೂಚಿಸಿದೆ.
ಉದ್ಯೋಗಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ದೃಢಪಡಿಸಿವೆ.
TCS ನಾಸಿಕ್ ಸೌಲಭ್ಯದಲ್ಲಿ ಧಾರ್ಮಿಕ ಮತಾಂತರ ಮತ್ತು ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಎಸ್ ಐಟಿ ತನಿಖೆ ನಡೆಸುತ್ತಿರುವುದರ ಮಧ್ಯೆ ಈ ಬೆಳವಣಿಗೆ ನಡೆದಿದೆ.
ಇದಕ್ಕೂ ಮುನ್ನ, TCS ನಾಸಿಕ್ ಕಚೇರಿಯಲ್ಲಿ ಆಪಾದಿತ ಧಾರ್ಮಿಕ ಮತಾಂತರ ಮತ್ತು ಲೈಂಗಿಕ ಕಿರುಕುಳದ ವಿರುದ್ಧ ಹಲವಾರು ಮಹಿಳೆಯರು 'ರಣ್ರಾಗಿಣಿ ಜನ್ ಅಕ್ರೋಶೋ' ಬೈಕ್ ರ್ಯಾಲಿಯನ್ನು ನಡೆಸಿದರು.
"ಹಿಂದೂ ಹುಡುಗಿಯರಿಗೆ ರೋಜಾ ಹಾಗೂ ನಮಾಜ್ ಮಾಡುವಂತೆ ಒತ್ತಡ ಹೇರುವುದು, ಅವರ ಮೇಲೆ ಅತ್ಯಾಚಾರ ಮಾಡುವುದು ಮತ್ತು ಮತಾಂತರಿಸುವುದು ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದೆ. ಅಂತಹ ವ್ಯಕ್ತಿಗಳ ರಾಷ್ಟ್ರೀಯತೆಯನ್ನು ರದ್ದುಗೊಳಿಸಬೇಕು. ಅವರ ವಿರುದ್ಧ ದೇಶದ್ರೋಹದ ಆರೋಪ ಹೊರಿಸಿ ಮರಣದಂಡನೆ ಶಿಕ್ಷೆ ವಿಧಿಸಬೇಕು. ಅವರ ಮನೆಗಳನ್ನು ಬುಲ್ಡೋಜರ್ ಮೂಲಕ ನೆಲಸಮಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



