'ಚಾಣಕ್ಯ ಬದುಕಿದ್ದಿದ್ದರೆ ನಿಮ್ಮ ರಾಜಕೀಯ ಕುತಂತ್ರ ಕಂಡು ಬೆಚ್ಚಿಬೀಳುತ್ತಿದ್ದ; NDA ಸರ್ಕಾರದ ಪಾಲಿಗೆ ಮಹಿಳಾ ಮೀಸಲಾತಿ ರಾಜಕೀಯ ಟ್ರಂಪ್ ಕಾರ್ಡ್'! Video
ಮಹಿಳಾ ಮೀಸಲಾತಿ ಎಂಬುದು ಎನ್‌ಡಿಎ ಸರ್ಕಾರದ ಪಾಲಿಗೆ ಚುನಾವಣೆಯಲ್ಲಿ ಲಾಭ ಮಾಡಿಕೊಳ್ಳಲು ಬಳಸುತ್ತಿರುವ ರಾಜಕೀಯ ಟ್ರಂಪ್ ಕಾರ್ಡ್ ಆಗಿದೆ. ಬಿಜೆಪಿ ಸಂವಿಧಾನಕ್ಕೆ ಧಕ್ಕೆ ತರುವ ಮೂಲಕ ತನ್ನ ಪಕ್ಷದ ಬುನಾದಿಯನ್ನು ಭದ್ರಪಡಿಸಿಕೊಳ್ಳುತ್ತಿದೆ.

ನವದೆಹಲಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್‌ನ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ 'ಚಾಣಕ್ಯ'ನ ಹೆಸರು ಉಲ್ಲೇಖಿಸಿ ಕಾಲೆಳೆದಿದ್ದಾರೆ.
ಗುರುವಾರ ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಪಕ್ಷವು ಮಹಿಳಾ ಮೀಸಲಾತಿಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಆದರೆ, ಇಲ್ಲಿ ಚರ್ಚೆ ನಡೆಯುತ್ತಿರುವುದು ಮೀಸಲಾತಿಯ ಬಗ್ಗೆ ಅಲ್ಲ, ಬದಲಾಗಿ ಈ ಮಸೂದೆಯಲ್ಲಿ ಅಡಗಿರುವ ರಾಜಕೀಯ ದುರುದ್ದೇಶದ ಬಗ್ಗೆ ಎಂದು ಗುಡುಗಿದರು.
ಮಹಿಳಾ ಮೀಸಲಾತಿ ಎಂಬುದು ಎನ್‌ಡಿಎ ಸರ್ಕಾರದ ಪಾಲಿಗೆ ಚುನಾವಣೆಯಲ್ಲಿ ಲಾಭ ಮಾಡಿಕೊಳ್ಳಲು ಬಳಸುತ್ತಿರುವ ರಾಜಕೀಯ ಟ್ರಂಪ್ ಕಾರ್ಡ್ ಆಗಿದೆ. ಬಿಜೆಪಿ ಸಂವಿಧಾನಕ್ಕೆ ಧಕ್ಕೆ ತರುವ ಮೂಲಕ ತನ್ನ ಪಕ್ಷದ ಬುನಾದಿಯನ್ನು ಭದ್ರಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ತಮ್ಮ ಮಾತಿಗೆ ಅಮಿತ್ ಶಾ ಹಾಗೂ ಇತರ ಬಿಜೆಪಿ ಸಂಸದರು ನಗುತ್ತಿರುವುದನ್ನು ಗಮನಿಸಿದ ಪ್ರಿಯಾಂಕಾ ಗಾಂಧಿ, "ನೀವೆಲ್ಲರೂ ಸಂಪೂರ್ಣವಾಗಿ ಪ್ಲಾನ್ ಮಾಡಿಕೊಂಡೇ ಬಂದಿದ್ದೀರಿ. ಇಂದು ಒಂದು ವೇಳೆ ಚಾಣಕ್ಯ ಬದುಕಿದ್ದರೆ, ಆತನೂ ಕೂಡ ನಿಮ್ಮ ಕುತಂತ್ರವನ್ನು ನೋಡಿ ಆಘಾತಕ್ಕೊಳಗಾಗುತ್ತಿದ್ದ ಎಂದು ಚಾಟಿ ಬೀಸಿದರು. ಪ್ರಿಯಾಂಕಾ ಅವರ ಈ ಮಾತು ಕೇಳಿ ಅಮಿತ್ ಶಾ, ಕಿರಣ್ ರಿಜಿಜು ಸೇರಿದಂತೆ ಹಲವು ಬಿಜೆಪಿ ಸಂಸದರು ಜೋರಾಗಿ ನಕ್ಕರು.
ಮಹಿಳೆಯರಿಗೆ ಯಾರು ಸುಳ್ಳು ಹೇಳುತ್ತಿದ್ದಾರೆ ಎಂಬುದನ್ನು ಗ್ರಹಿಸುವ ಶಕ್ತಿ ಇರುತ್ತದೆ. ಹಾಗಾಗಿ ಬಿಜೆಪಿ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಪ್ರಧಾನಿಯವರು ತಾವೇ ಮಹಿಳಾ ಮೀಸಲಾತಿಯ ಅತಿ ದೊಡ್ಡ ಬೆಂಬಲಿಗರು ಹಾಗೂ ಪ್ರತಿಪಾದಕರು ಎಂಬಂತೆ ಮಾತನಾಡಿದರು.
2023ರಲ್ಲಿ ರಾಹುಲ್ ಗಾಂಧಿ ಪತ್ರ ಬರೆದ ಬಳಿಕ ಈ ಮಸೂದೆ ಅಂಗೀಕಾರವಾದಾಗ, ಕಾಂಗ್ರೆಸ್ ತನ್ನ ಸಿದ್ಧಾಂತಕ್ಕೆ ಅನುಗುಣವಾಗಿ ಅದನ್ನು ಸಂಪೂರ್ಣವಾಗಿ ಬೆಂಬಲಿಸಿತ್ತು" ಎಂದು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



