TCS 'ಲವ್ ಜಿಹಾದ್' ಪ್ರಕರಣದ ಸಂಪೂರ್ಣ ಮಾಡ್ಯೂಲ್ ಅನ್ನೇ ಭೇದಿಸುತ್ತೇವೆ: ಮಹಾರಾಷ್ಟ್ರ ಸಿಎಂ ಫಡ್ನವೀಸ್
"ಇದು ಒಂದು ಮಾಡ್ಯೂಲ್‌ನಿಂದ ಹುಟ್ಟಿಕೊಟ್ಟ ಗಂಭೀರ ಸಮಸ್ಯೆಯಾಗಿದೆ. ನಾವು ಆ ಮಾಡ್ಯೂಲ್ ಅನ್ನು ಭೇದಿಸುತ್ತೇವೆ. ನಾವು ಕೇಂದ್ರ ಸಂಸ್ಥೆಗಳಿಂದಲೂ ಸಹಾಯ ಪಡೆಯುತ್ತಿದ್ದೇವೆ" ಎಂದು ಮಹಾ ಸಿಎಂ ಹೇಳಿದ್ದಾರೆ.

ಮುಂಬೈ: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ ಕಾರ್ಪೊರೇಟ್ ಜಿಹಾದ್ ಮತ್ತು ಲೈಂಗಿಕ ಕಿರುಕುಳ ಪ್ರಕರಣದ ಸಂಪೂರ್ಣ ಮಾಡ್ಯೂಲ್ ಅನ್ನು ಭೇದಿಸುತ್ತೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಶುಕ್ರವಾರ ಹೇಳಿದ್ದಾರೆ.
ಈ ಸಂಬಂಧ ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಫಡ್ನವೀಸ್, ಬಹುರಾಷ್ಟ್ರೀಯ ಕಂಪನಿ ಟಿಸಿಎಸ್ "ಈ ವಿಷಯವನ್ನು ಗಂಭೀರವಾಗಿ ಗಮನಿಸಿದೆ ಮತ್ತು ಪ್ರಸ್ತುತ ನಡೆಯುತ್ತಿರುವ ತನಿಖೆಗೆ ಸಹಾಯ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ" ಎಂದು ತಿಳಿಸಿದರು.
"ಇದು ಒಂದು ಮಾಡ್ಯೂಲ್‌ನಿಂದ ಹುಟ್ಟಿಕೊಟ್ಟ ಗಂಭೀರ ಸಮಸ್ಯೆಯಾಗಿದೆ. ನಾವು ಆ ಮಾಡ್ಯೂಲ್ ಅನ್ನು ಭೇದಿಸುತ್ತೇವೆ. ನಾವು ಕೇಂದ್ರ ಸಂಸ್ಥೆಗಳಿಂದಲೂ ಸಹಾಯ ಪಡೆಯುತ್ತಿದ್ದೇವೆ" ಎಂದು ಮಹಾ ಸಿಎಂ ಹೇಳಿದ್ದಾರೆ.
ಐಟಿ ಸಂಸ್ಥೆ ತೆಗೆದುಕೊಂಡ ಕ್ರಮಗಳನ್ನು ಶ್ಲಾಘಿಸಿದ ಅವರು, "ಇದರಲ್ಲಿ ಭಾಗಿಯಾಗಿರುವ ಯಾರನ್ನೂ ರಕ್ಷಿಸುವುದಿಲ್ಲ" ಎಂದು ಸ್ಪಷ್ಟಪಡಿಸಿದರು.
ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿಯನ್ನು ಉಲ್ಲೇಖಿಸಿ ಮುಂಬೈನಿಂದ ಬಂದ ಹಿಂದಿನ ವರದಿಯ ಪ್ರಕಾರ, ಪ್ರಕರಣದ ತನಿಖೆಯು, ಮಹಿಳಾ ಉದ್ಯೋಗಿಗಳನ್ನು ಗುರಿಯಾಗಿಸಲು ಏಳು ಪುರುಷ ಆರೋಪಿಗಳು ಸಂಘಟಿತ ಗ್ಯಾಂಗ್‌ನಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದೆ.
ಈ ಆರೋಪಗಳಿಗೆ ಸಂಬಂಧಿಸಿದಂತೆ ಪೊಲೀಸರು ಒಂಬತ್ತು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ವರದಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



