ವಿರೋಧ ಪಕ್ಷಗಳ 'ಮಹಿಳಾ ವಿರೋಧಿ' ಮನಸ್ಥಿತಿ ಬಯಲು ಮಾಡಿ: ಸಚಿವರಿಗೆ ಪ್ರಧಾನಿ ಮೋದಿ ಸೂಚನೆ
ವಿರೋಧ ಪಕ್ಷಗಳು ಮಹಿಳಾ ಮೀಸಲಾತಿಗೆ ವಿರುದ್ಧವಾಗಿ ಮತ ಚಲಾಯಿಸುವ ಮೂಲಕ ಅತಿ ದೊಡ್ಡ ತಪ್ಪು ಮಾಡಿವೆ ಮತ್ತು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಪ್ರಧಾನಿ ಮೋದಿ, ಸಂಪುಟ ಸಭೆಯಲ್ಲಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಮಹಿಳಾ ಮೀಸಲಾತಿಯನ್ನು ಶೀಘ್ರವಾಗಿ ಜಾರಿಗೆ ತರುವ ಮಸೂದೆಯನ್ನು ಬೆಂಬಲಿಸದ ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಬೆಲೆ ತೆರಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಅಲ್ಲದೆ ಕೇಂದ್ರ ಸಚಿವರು ವಿರೋಧ ಪಕ್ಷಗಳ 'ಮಹಿಳಾ ವಿರೋಧಿ' ಮನಸ್ಥಿತಿಯನ್ನು ಜನರ ಮುಂದೆ ಬಹಿರಂಗಪಡಿಸಬೇಕೆಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
2029ರ ಲೋಕಸಭಾ ಚುನಾವಣೆಯಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ತಮ್ಮ ಸರ್ಕಾರದ ಬೆಂಬಲ ಮತ್ತು ಬದ್ಧತೆಯನ್ನು ಪ್ರಧಾನಿ ಮೋದಿ ಅವರು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪುನರುಚ್ಚರಿಸಿದರು.
ವಿರೋಧ ಪಕ್ಷಗಳು ಮಹಿಳಾ ಮೀಸಲಾತಿಗೆ ವಿರುದ್ಧವಾಗಿ ಮತ ಚಲಾಯಿಸುವ ಮೂಲಕ ಅತಿ ದೊಡ್ಡ ತಪ್ಪು ಮಾಡಿವೆ ಮತ್ತು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಪ್ರಧಾನಿ ಮೋದಿ, ಸಂಪುಟ ಸಭೆಯಲ್ಲಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ವಿಷಯವನ್ನು ತಳಮಟ್ಟಕ್ಕೆ ಅಂದರೆ ದೇಶದ ಪ್ರತಿ ಹಳ್ಳಿಗೂ ಕೊಂಡೊಯ್ಯುವಂತೆ ಮತ್ತು ವಿರೋಧ ಪಕ್ಷಗಳ 'ಮಹಿಳಾ ವಿರೋಧಿ' ಮನಸ್ಥಿತಿಯನ್ನು ಜನರ ಮುಂದೆ ಬಹಿರಂಗಪಡಿಸುವಂತೆ ಪ್ರಧಾನಿ ಮೋದಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಸೂಚಿಸಿದ್ದಾರೆ.
ವಿರೋಧ ಪಕ್ಷಗಳ ನಿಲುವನ್ನು ಖಂಡಿಸಿ ನಿಮ್ಮ ನಿಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಪೋಸ್ಟ್ ಮಾಡುವಂತೆ ಮೋದಿ ಸಚಿವರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



