ಮುಂಬೈ: ಸ್ವಯಂಘೋಷಿತ ದೇವಮಾನವ ಅಶೋಕ್ ಖರಾತ್ ಆಪ್ತ ಜಿತೇಂದ್ರ ಶೆಲ್ಕೆ ದಂಪತಿ ಅಪಘಾತದಲ್ಲಿ ನಿಧನ
ಜಿತೇಂದ್ರ ಶೆಲ್ಕೆ (55) ಮತ್ತು ಅವರ ಪತ್ನಿ ಅನುರಾಧ (50) ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಪುತ್ರನಿಗೆ ಅಪಘಾತದಲ್ಲಿ ಗಂಭೀರ ಗಾಯಗಳಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬಯಿ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರಾತನ ಅತ್ಯಂತ ಆಪ್ತ ಸಹಚರ ಹಾಗೂ ಶಿವಾನಿಕಾ ಟ್ರಸ್ಟ್‌ನ ನಿರ್ದೇಶಕ ಜಿತೇಂದ್ರ ಶೆಲ್ಕೆ ಮತ್ತು ಅವರ ಪತ್ನಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಛತ್ರಪತಿ ಸಂಭಾಜಿನಗರದಿಂದ ಶಿರಡಿಗೆ ಹೋಗುವ ರಸ್ತೆಯ 'ಧೋತ್ರೆ' ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಜಿತೇಂದ್ರ ಶೆಲ್ಕೆ ಮತ್ತು ಅವರ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಮಗನನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಕಾರು ನಿಂತಿದ್ದ ಕಂಟೇನರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಜಿತೇಂದ್ರ ಶೆಲ್ಕೆ (55) ಮತ್ತು ಅವರ ಪತ್ನಿ ಅನುರಾಧ (50) ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಪುತ್ರನಿಗೆ ಅಪಘಾತದಲ್ಲಿ ಗಂಭೀರ ಗಾಯಗಳಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾರನ್ನು ಚಲಾಯಿಸುತ್ತಿದ್ದ ಶೆಲ್ಕೆ, ಅವರ ಪತ್ನಿ ಮತ್ತು ಮಗ ಛತ್ರಪತಿ ಸಂಭಾಜಿನಗರದಿಂದ ಮುಂಬೈ-ನಾಗ್ಪುರ ಸಮೃದ್ಧಿ ಎಕ್ಸ್‌ಪ್ರೆಸ್‌ವೇ ಮೂಲಕ ಥಾಣೆಗೆ ಬರುತ್ತಿದ್ದರು. ಕಾರು ಧೋತ್ರೆ ತಲುಪುತ್ತಿದ್ದಂತೆ, ವಾಹನದ ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಕಂಟೇನರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



