ದೇಶ

ಜಾರ್ಖಂಡ್: ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಹೊಡೆದು ಕೊಂದ ತಂದೆ, ಬಂಧನ!

ಜಾರ್ಖಂಡ್‌ನ ರಾಂಚಿ ಜಿಲ್ಲೆಯಲ್ಲಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಹೊಡೆದು ಕೊಂದ ಆರೋಪದ ಮೇಲೆ ತಂದೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾರ್ಖಂಡ್: ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಹೊಡೆದು ಕೊಂದ ತಂದೆ, ಬಂಧನ!
ಸಾಂದರ್ಭಿಕ ಚಿತ್ರ
Published On :

ರಾಂಚಿ: ಜಾರ್ಖಂಡ್‌ನ ರಾಂಚಿ ಜಿಲ್ಲೆಯಲ್ಲಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಹೊಡೆದು ಕೊಂದ ಆರೋಪದ ಮೇಲೆ ತಂದೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಕಿದಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಹಾರ್ತು ಗ್ರಾಮದಲ್ಲಿ ಮಾರ್ಚ್ 21ರಂದು ಈ ಘಟನೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮೃತನ ತಂದೆ ಮಾರ್ಚ್ 22ರಂದು ಈ ಸಂಬಂಧ ದೂರು ದಾಖಲಿಸಿದ್ದರು.

ಸಿಕಿದಾರಿ ಪೊಲೀಸ್ ಠಾಣೆಯ ಸಬ್-ಇನ್ಸ್‌ಪೆಕ್ಟರ್ ಬರುಣ್ ಕುಮಾರ್, ಅಪರಾಧವನ್ನು ಒಪ್ಪಿಕೊಂಡ ನಂತರ ಆರೋಪಿಯನ್ನು ಬಂಧಿಸಲಾಗಿದೆ. ಮೃತನು ತನ್ನ 14 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾರೆ. ಮಗಳು ತನ್ನ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ತಿಳಿಸಿದಾಗ ಅದರಿಂದ ಕೋಪಗೊಂಡು ಕೋಲಿನಿಂದ ಹೊಡೆದು ಕೊಂದಿದ್ದಾಗಿ ಆರೋಪಿ ತಿಳಿಸಿದ್ದಾರೆ.

ಕೊಲೆಗೆ ಬಳಸಲಾದ ಕೋಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾನೂನು ಕ್ರಮಗಳ ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.