ಬುರ್ಖಾ ಧರಿಸದಿದ್ದರೆ ರೇಪ್ ಮಾಡುವ ಬೆದರಿಕೆ; ಟೀಂ ಲೀಡರ್ ಕೆಟ್ಟದಾಗಿ ಮುಟ್ಟುತ್ತಿದ್ದ: TCS ಭಯಾನಕತೆ ಬಿಚ್ಚಿಟ್ಟ ಸಂತ್ರಸ್ತೆ
ನಿದಾ ಖಾನ್ ಅವರು ನಿರೀಕ್ಷಣಾ ಜಾಮೀನು ಕೋರಿ ನಾಸಿಕ್ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಸೋಮವಾರ ವಿಚಾರಣೆಗೆ ಬರಲಿದೆ.

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ ಕಾರ್ಪೊರೇಟ್ ಜಿಹಾದ್ ಮತ್ತು ಲೈಂಗಿಕ ಕಿರುಕುಳ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ.
ಕಾರ್ಪೊರೇಟ್ ಲವ್ ಜಿಹಾದ್ ಇದೀಗ ದೇಶದಲ್ಲಿ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕುತ್ತಿದ್ದು, ತರಬೇತಿ ಅವಧಿಯಲ್ಲಿ ಧರ್ಮದ ವಿರುದ್ಧ ಅವಹೇಳನಕಾರಿ ನಿಂದನೆಗಳಿಂದ ಹಿಡಿದು ಟೀಂ ಲೀಡರ್ ನ ಅನುಚಿತ ವರ್ತನೆವರೆಗೆ, ಟಿಸಿಎಸ್ ನ ನಾಸಿಕ್ ಘಟಕದ ಮಹಿಳಾ ಎಂಜಿನಿಯರ್ ಒಬ್ಬರು ಕಚೇರಿಯಲ್ಲಿ ಎದುರಿಸಿದ ಕಿರುಕುಳ ಮತ್ತು ಧಾರ್ಮಿಕ ದಬ್ಬಾಳಿಕೆಯ ಭಯಾನಕತೆಯನ್ನು ಬಹಿರಂಗಪಡಿಸಿದ್ದಾರೆ.
ಒಂಬತ್ತು ಎಫ್‌ಐಆರ್‌ಗಳಲ್ಲಿ ಒಂದಾದ ಮನಕಲಕುವ ಹೇಳಿಕೆಯಲ್ಲಿ, ದೂರುದಾರರು ಬುರ್ಖಾ ಧರಿಸದ ಕಾರಣ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಮತ್ತು ಮತ್ತು ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಟಿಸಿಎಸ್ ಘಟಕದಲ್ಲಿ ಮಹಿಳಾ ಉದ್ಯೋಗಿಗಳ ಶೋಷಣೆ, ಬಲವಂತದ ಮತಾಂತರ ಯತ್ನ, ಧಾರ್ಮಿಕ ಭಾವನೆಗಳಿಗೆ ಧಕ್ಕೆ, ಕಿರುಕುಳ ಮತ್ತು ಮಾನಸಿಕ ಕಿರುಕುಳದ ಆರೋಪಗಳು ಬೆಳಕಿಗೆ ಬಂದ ನಂತರ ನಾಸಿಕ್ ಪೊಲೀಸರ ವಿಶೇಷ ತನಿಖಾ ತಂಡ(SIT) ಮಹಿಳಾ ವ್ಯವಸ್ಥಾಪಕಿ ಸೇರಿದಂತೆ ಎಂಟು ಜನರನ್ನು ಬಂಧಿಸಿದೆ ಮತ್ತು ಈ ಸಂಬಂಧ ಒಂಬತ್ತು ಎಫ್‌ಐಆರ್‌ಗಳನ್ನು ದಾಖಲಿಸಿದೆ.
ಮತ್ತೊಬ್ಬ ಆರೋಪಿ ನಿದಾ ಖಾನ್ ಅವರನ್ನು ಪತ್ತೆಹಚ್ಚಲು ನಾಸಿಕ್ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದಾರೆ. ಈ ತಂಡಗಳನ್ನು ವಿವಿಧ ಸ್ಥಳಗಳಿಗೆ ಕಳುಹಿಸಲಾಗಿದೆ ಮತ್ತು ಅವುಗಳಲ್ಲಿ ಒಂದು ತಂಡ ಥಾಣೆ ಬಳಿಯ ಮುಂಬ್ರಾಗೆ ತೆರಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏತನ್ಮಧ್ಯೆ, ನಿದಾ ಖಾನ್ ಅವರು ನಿರೀಕ್ಷಣಾ ಜಾಮೀನು ಕೋರಿ ನಾಸಿಕ್ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಸೋಮವಾರ ವಿಚಾರಣೆಗೆ ಬರಲಿದೆ.
ಜೂನ್ 2025 ಮತ್ತು ಮಾರ್ಚ್ 2026 ರ ನಡುವೆ ಐದು ಆರೋಪಿಗಳು, ತಮ್ಮ ಮೇಲೆ ಲೈಂಗಿಕ ಕಿರುಕುಳ, ಕಿರುಕುಳ ಮತ್ತು ಧಾರ್ಮಿಕ ಭಾವನೆಗಳಿಗೆ ಉದ್ದೇಶಪೂರ್ವಕ ಧಕ್ಕೆ ಮಾಡಿದ್ದಾರೆ ಎಂದು ಸಂತ್ರಸ್ತೆ ತಮ್ಮ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
ಆರೋಪಿಗಳಲ್ಲಿ ಒಬ್ಬರು ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು "ಮಹಿಳೆಯರು ಬುರ್ಖಾ ಧರಿಸದಿದ್ದರೆ ಅತ್ಯಾಚಾರ ಎಸಗುತ್ತಾರೆ" ಎಂದು ಎಚ್ಚರಿಸಿರುವುದಾಗಿ ಅವರು ಹೇಳಿಕೊಂಡಿದ್ದಾರೆ.
ಔಪಚಾರಿಕ ತರಬೇತಿಯ ನೆಪದಲ್ಲಿ ತಮ್ಮ ತಂಡದ ನಾಯಕ, ತನ್ನನ್ನು ಅನುಚಿತವಾಗಿ ಮುಟ್ಟಿದ್ದಾರೆ ಎಂದು ಮಹಿಳಾ ಉದ್ಯೋಗಿಯೊಬ್ಬರು ಹೇಳಿಕೊಂಡಿದ್ದಾರೆ ಮತ್ತು ಗುಡಿ ಪಾಡ್ವಾ ಆಚರಣೆಯ ಸಮಯದಲ್ಲಿ ಕಚೇರಿಯ ಪ್ಯಾಂಟ್ರಿಯಲ್ಲಿ ಮತ್ತೊಬ್ಬ ಆರೋಪಿ ತನ್ನ ಮೇಲೆ ಇದೇ ರೀತಿಯ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




