ದೇಶ

ದೆಹಲಿಯಲ್ಲಿ ಆಘಾತಕಾರಿ ಘಟನೆ: ಹಿರಿಯ ಅಧಿಕಾರಿಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ!

ಎಂಜಿನಿಯರಿಂಗ್ ಮುಗಿಸಿ ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಹಿರಿಯ ಅಧಿಕಾರಿಯ ಪುತ್ರಿಯನ್ನು ಕೊಲ್ಲುವ ಮುನ್ನ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ದೆಹಲಿಯಲ್ಲಿ ಆಘಾತಕಾರಿ ಘಟನೆ: ಹಿರಿಯ ಅಧಿಕಾರಿಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ!
ಸಾಂಕೇತಿಕ ಚಿತ್ರ
Published On :

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರ 22 ವರ್ಷದ ಮಗಳು ಬುಧವಾರ ಬೆಳಗ್ಗೆ ಆಗ್ನೇಯ ದೆಹಲಿಯ ವಸಾಹತು ಪ್ರದೇಶದಲ್ಲಿರುವ ಅವರ ಮನೆಯಲ್ಲಿ ಕೊಲೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಎಂಜಿನಿಯರಿಂಗ್ ಮುಗಿಸಿ ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಹಿರಿಯ ಅಧಿಕಾರಿಯ ಪುತ್ರಿಯನ್ನು ಕೊಲ್ಲುವ ಮುನ್ನ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಯುವತಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದ್ದು, ಕೃತ್ಯಕ್ಕೆ ಮೊಬೈಲ್ ಫೋನ್ ಚಾರ್ಜಿಂಗ್ ಕೇಬಲ್ ಬಳಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಸಮಯದಲ್ಲಿ ಮನೆಯಲ್ಲಿ ಯುವತಿ ಒಬ್ಬಳೇ ಇದ್ದಳು. ಆಕೆಯ ಪೋಷಕರು ಜಿಮ್‌ಗೆ ಹೋಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸುಮಾರು ಒಂದೂವರೆ ತಿಂಗಳ ಹಿಂದೆ ಕೆಲಸದಿಂದ ತೆಗೆದುಹಾಕಲ್ಪಟ್ಟ ಮನೆ ಕೆಲಸದ ವ್ಯಕ್ತಿಯ ಮೇಲೆ ಅನುಮಾನ ಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶಂಕಿತನನ್ನು ಪತ್ತೆಹಚ್ಚಲು ತಂಡಗಳನ್ನು ರಚಿಸಿದ್ದಾರೆ.

ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.