ಹೃದಯ ವಿದ್ರಾವಕ ಘಟನೆ: ಪತ್ನಿ, ತಾಯಿ ಕೊಂದು, ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ!
ಮೋಹನ್ ಎಂಬ ವ್ಯಕ್ತಿ ತನ್ನ ಪತ್ನಿ ಮತ್ತು ಹೆತ್ತ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಾರಾಯಣವನಂ ಮಂಡಲದ ವೆಂಕಟಕೃಷ್ಣಪಾಲೆಂ ಪಂಚಾಯತ್‌ನಲ್ಲಿ ನಡೆದಿದೆ.

ತಿರುಪತಿ: ಆಂದ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿ ಬುಧವಾರ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಐದು ಜನರ ಇಡೀ ಕುಟುಂಬವೇ ಕೆಲವೇ ಗಂಟೆಗಳಲ್ಲಿ ಪ್ರಾಣ ಕಳೆದುಕೊಂಡಿದೆ.
ಮಧ್ಯವಯಸ್ಕ ಮೋಹನ್ ಎಂಬ ವ್ಯಕ್ತಿ ತನ್ನ ಪತ್ನಿ ಮತ್ತು ಹೆತ್ತ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಾರಾಯಣವನಂ ಮಂಡಲದ ವೆಂಕಟಕೃಷ್ಣಪಾಲೆಂ ಪಂಚಾಯತ್‌ನಲ್ಲಿ ನಡೆದಿದೆ.
ಮೋಹನ್ ಅವರ ಪತ್ನಿ ಹರಿತಾ(33) ಟೈಲರಿಂಗ್ ಮತ್ತು ಬ್ಯೂಟಿ ವ್ಯವಹಾರ ನಡೆಸುತ್ತಿದ್ದರು. ಆದರೆ ಅವರ ತಾಯಿ ಚಂದ್ರಕಲಾ (65) ಗೃಹಿಣಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮೋಹನ್ ಅವರು ತನ್ನ ತಾಯಿ ಚಂದ್ರಕಲಾ (65) ಮತ್ತು ಪತ್ನಿ ಹರಿತಾ (33) ಅವರನ್ನು ಮನೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಬಳಿಕ ಅಲ್ಲಿಂದ ಇಬ್ಬರು ಮಕ್ಕಳಾದ ಕೌಶಿಕ್(14) ಮತ್ತು ಹರಿಣಿ (12) ಓದುತ್ತಿದ್ದ ಶಾಲೆಗೆ ಹೋಗಿ ಮನೆಯಲ್ಲಿ ಕುಟುಂಬದ ಸದಸ್ಯರೊಬ್ಬರು ನಿಧನ ಹೊಂದಿದ್ದಾರೆ ಎಂದು ಮಕ್ಕಳನ್ನು ಕರೆದುಕೊಂಡು ಬಂದಿದ್ದ. ಆದರೆ ಆತ ಮನೆಗೆ ವಾಪಸ್ ಆಗಿರಲಿಲ್ಲ.
ಮೋಹನ್ ಅವರು ತನ್ನ ತಾಯಿ ಚಂದ್ರಕಲಾ (65) ಮತ್ತು ಪತ್ನಿ ಹರಿತಾ (33) ಅವರನ್ನು ಮನೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಬಳಿಕ ಅಲ್ಲಿಂದ ಇಬ್ಬರು ಮಕ್ಕಳಾದ ಕೌಶಿಕ್(14) ಮತ್ತು ಹರಿಣಿ (12) ಓದುತ್ತಿದ್ದ ಶಾಲೆಗೆ ಹೋಗಿ ಮನೆಯಲ್ಲಿ ಕುಟುಂಬದ ಸದಸ್ಯರೊಬ್ಬರು ನಿಧನ ಹೊಂದಿದ್ದಾರೆ ಎಂದು ಮಕ್ಕಳನ್ನು ಕರೆದುಕೊಂಡು ಬಂದಿದ್ದ. ಆದರೆ ಆತ ಮನೆಗೆ ವಾಪಸ್ ಆಗಿರಲಿಲ್ಲ.
ಹರಿತಾ ಅವರ ಸಹೋದರ ಮೋಹನ್‌ಗೆ ಕರೆ ಮಾಡಿದಾಗ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು ಗೊತ್ತಾಗಿದೆ. ಅನುಮಾನಗೊಂಡು ಮನೆಯನ್ನು ಪರಿಶೀಲಿಸಿದಾಗ ಇಬ್ಬರ ಶವ ಪತ್ತೆಯಾಗಿದೆ. ಬಳಿಕ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪೊಲೀಸರು ಹುಡುಕಾಟ ನಡೆಸಿದಾಗ ಮೋಹನ್ ಮಕ್ಕೊಳೊಂದಿಗೆ ಪುತ್ತೂರು ತಾಲೂಕಿನ ವೇಪಗುಂಟ ಬಳಿಯ ರೈಲ್ವೆ ಹಳಿಯ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.
ಕೊಲೆ ಮತ್ತು ನಂತರ ಮೋಹನ್ ಆತ್ಮಹತ್ಯೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ವಿಚಾರಣೆಯಲ್ಲಿ ಮೋಹನ್‌ಗೆ ಯಾವುದೇ ಆರ್ಥಿಕ ಅಥವಾ ಮಾನಸಿಕ ಆರೋಗ್ಯ ಸಮಸ್ಯೆಗಳಿಲ್ಲ ಎಂದು ತಿಳಿದುಬಂದಿದೆ.
ಈ ಸಂಬಂಧ ನಾರಾಯಣವನಂ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ರೈಲ್ವೆ ಅಧಿಕಾರಿಗಳು ಹಳಿಗಳ ಮೇಲಿನ ಸಾವುಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



