ಬಿಹಾರ: ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದು ಬೀಗಿದ ಸಾಮ್ರಾಟ್ ಚೌಧರಿ
243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ನಿರ್ಣಯವನ್ನು ಅಂಗೀಕರಿಸಲಾಯಿತು.

ಪಾಟ್ನಾ: ಬಿಹಾರ ನೂತನ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ ಸರ್ಕಾರವು ಶುಕ್ರವಾರ ವಿಧಾನಸಭೆಯಲ್ಲಿ ವಿಶ್ವಾಸ ಮತವನ್ನು ಗೆದ್ದಿದೆ.
ಬಹುಮತ ಸಾಬೀತುಪಡಿಸಲು ಕರೆಯಲಾಗಿದ್ದ ಒಂದು ದಿನದ ವಿಶೇಷ ಅಧಿವೇಶನದಲ್ಲಿ ಸಾಮ್ರಾಟ್ ಚೌಧರಿ ಅವರು 'ರಾಜ್ಯದ ಪ್ರಸ್ತುತ ಸಚಿವ ಸಂಪುಟದ ಮೇಲೆ ಸದನವು ತನ್ನ ನಂಬಿಕೆಯನ್ನು ಇರಿಸುತ್ತದೆ' ಎಂದು ಪ್ರಸ್ತಾಪಿಸುವ ನಿರ್ಣಯವನ್ನು ಮಂಡಿಸಿದರು.
243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ನಿರ್ಣಯವನ್ನು ಪಾಸ್ ಮಾಡಲಾಯಿತು. ವಿಶ್ವಾಸಮತ ಗೆಲ್ಲಲು ಸರ್ಕಾರಕ್ಕೆ 122 ಮತಗಳ ಅಗತ್ಯ ಇದೆ. ಆದರೆ, ಎನ್ಡಿಎ 202 ಸದಸ್ಯರನ್ನು ಹೊಂದಿದ್ದು, ಸಂಪೂರ್ಣ ಬೆಂಬಲ ಪಡೆದಿದೆ.
ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರು ರಾಜ್ಯಸಭೆಗೆ ಆಯ್ಕೆಯಾದ ನಂತರ ಮುಖ್ಯಮಂತ್ರಿ ಹುದ್ದೆಯನ್ನು ತ್ಯಜಿಸಿದ ನಂತರ ಈ ತಿಂಗಳ ಆರಂಭದಲ್ಲಿ ಸಾಮ್ರಾಚ್ ಚೌಧರಿ ಅವರು ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ರಚಿಸಿದ್ದರು.
ಜೆಡಿ-ಯು ನಾಯಕರಾದ ವಿಜಯ್ ಕುಮಾರ್ ಚೌಧರಿ ಮತ್ತು ಬಿಜೇಂದ್ರ ಪ್ರಸಾದ್ ಯಾದವ್ ಅವರನ್ನು ಮಾತ್ರ ಹೊಸ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದ್ದು, ಅವರನ್ನು ಉಪಮುಖ್ಯಮಂತ್ರಿಗಳಾಗಿ ನೇಮಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



