ಎರಡು ಮದುವೆ ಮೆರವಣಿಗೆ ವೇಳೆ ಕಲ್ಲು ತೂರಾಟ, ಘರ್ಷಣೆ; ಒಬ್ಬ ಸಾವು: ಅಷ್ಟಕ್ಕೂ ಅಲ್ಲಿ ಆಗಿದ್ದೇನು?
ಗೈಘಾಟ್ ಗ್ರಾಮಕ್ಕೆ ಭಾನುವಾರ ರಾತ್ರಿ ಮದುವೆ ಮೆರವಣಿಗೆ ಆಗಮಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಸಂತ ಕಬೀರ್ ನಗರ ಎಸ್ಪಿ ಸಂದೀಪ್ ಕುಮಾರ್ ಮೀನಾ ತಿಳಿಸಿದ್ದಾರೆ.

ಸಂತ ಕಬೀರ್ ನಗರ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಎರಡು ಮದುವೆ ಮೆರವಣಿಗೆಗಳ ನಡುವೆ ನಡೆದ ಘರ್ಷಣೆಯಲ್ಲಿ 22 ವರ್ಷದ ಯುವಕನೊಬ್ಬ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಗೈಘಾಟ್ ಗ್ರಾಮಕ್ಕೆ ಭಾನುವಾರ ರಾತ್ರಿ ಮದುವೆ ಮೆರವಣಿಗೆ ಆಗಮಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಸಂತ ಕಬೀರ್ ನಗರ ಎಸ್ಪಿ ಸಂದೀಪ್ ಕುಮಾರ್ ಮೀನಾ ತಿಳಿಸಿದ್ದಾರೆ.
ಸ್ಥಳೀಯ ಯುವಕನೊಬ್ಬನ ಮದುವೆ ಮೆರವಣಿಗೆ ಹೊರಟಿದ್ದಾಗ ಈ ಘಟನೆ ಸಂಭವಿಸಿದೆ. ಮೆರವಣಿಗೆ ಸಮಯದಲ್ಲಿ, ಅಪರಿಚಿತ ವ್ಯಕ್ತಿಯೊಬ್ಬರು ಕಲ್ಲು ಎಸೆದಿದ್ದು, ಅದು ಮಹಿಳೆಯೊಬ್ಬರಿಗೆ ತಗುಲಿದೆ. ನಂತರ ಎರಡೂ ಮದುವೆ ಮೆರವಣಿಗೆಗಳ ನಡುವೆ ಘರ್ಷಣೆಗೆ ಕಾರಣವಾಯಿತು ಎಂದು ಮೀನಾ ಹೇಳಿದ್ದಾರೆ.
ಪೊಲೀಸರ ಪ್ರಕಾರ, ಘಟನೆಯಲ್ಲಿ ಏಳು ಜನ ಗಾಯಗೊಂಡಿದ್ದು, ಅವರನ್ನು ಗೋರಖ್‌ಪುರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಸ್ಥಳೀಯ ಅನಿಲ್ ನಿಶಾದ್ ಸೋಮವಾರ ಮೃತಪಟ್ಟಿದ್ದಾರೆ.
ಅನಿಲ್ ಸಾವಿನ ನಂತರ, ಗ್ರಾಮದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದ್ದು, ಘಟನೆಯಲ್ಲಿ ಭಾಗಿಯಾಗಿರುವ ಒಬ್ಬ ವ್ಯಕ್ತಿಯ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿದರು.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು ಎಂದು ಎಸ್ಪಿ ತಿಳಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆ ಆರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಪ್ರಕರಣದಲ್ಲಿ ಕೆಲವು ಆರೋಪಿಗಳನ್ನು ಬಂಧಿಸಲಾಗಿದ್ದು, ಇತರರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ. ಘಟನೆಯಲ್ಲಿ ಭಾಗಿಯಾಗಿರುವ ಎರಡೂ ಕಡೆಯವರು ನಿಶಾದ್ ಸಮುದಾಯಕ್ಕೆ ಸೇರಿದವರು ಎಂದು ಎಸ್ಪಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



