ದೇಶ

ದೆಹಲಿ ಬಿಜೆಪಿ ಅಧ್ಯಕ್ಷರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದ ಸ್ವಾತಿ ಮಲಿವಾಲ್

ಸುದ್ದಿಗಾರರೊಂದಿಗೆ ಮಾತನಾಡಿದ ಮಲಿವಾಲ್, ನಾವು ಯಾವುದೇ ಒತ್ತಡದಿಂದಲೂ ಈ ನಿರ್ಧಾರ ತೆಗೆದುಕೊಂಡಿಲ್ಲ. ಬದಲಾಗಿ ಕೇಸರಿ ಪಕ್ಷದ ಕೆಲಸಗಳಿಂದ ಪ್ರೇರಿತಳಾಗಿದ್ದೇನೆ ಎಂದು ಹೇಳಿದ್ದಾರೆ.

ದೆಹಲಿ ಬಿಜೆಪಿ ಅಧ್ಯಕ್ಷರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದ ಸ್ವಾತಿ ಮಲಿವಾಲ್
ಬಿಜೆಪಿ ಸೇರಿದ ಸ್ವಾತಿ ಮಲಿವಾಲ್
Published On :

ನವದೆಹಲಿ: ಆಮ್ ಆದ್ಮಿ ಪಕ್ಷದ ಮಾಜಿ ನಾಯಕಿ ಮತ್ತು ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರು ಮಂಗಳವಾರ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ)ಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.

ಸುದ್ದಿಗಾರರೊಂದಿಗೆ ಮಾತನಾಡಿದ ಮಲಿವಾಲ್, ನಾವು ಯಾವುದೇ ಒತ್ತಡದಿಂದಲೂ ಈ ನಿರ್ಧಾರ ತೆಗೆದುಕೊಂಡಿಲ್ಲ. ಬದಲಾಗಿ ಕೇಸರಿ ಪಕ್ಷದ ಕೆಲಸಗಳಿಂದ ಪ್ರೇರಿತಳಾಗಿದ್ದೇನೆ ಎಂದು ಹೇಳಿದ್ದಾರೆ.

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆಯಾಗಿ ಕೆಲಸ ಮಾಡಿದ ಅನುಭವವನ್ನು ನೆನಪಿಸಿಕೊಂಡ ಸ್ವಾತಿ, ಬಿಜೆಪಿಯಿಂದ ಪಡೆದ ಬೆಂಬಲವನ್ನು ಶ್ಲಾಘಿಸಿದರು.

"ನಾನು ಯಾವುದೇ ಒತ್ತಡದಿಂದ ಬಿಜೆಪಿ ಸೇರಿಲ್ಲ. ನಾನು ಹಲವು ವರ್ಷಗಳಿಂದ ಬಿಜೆಪಿಯ ಕೆಲಸದಲ್ಲಿ ಆಸಕ್ತಿ ಹೊಂದಿದ್ದೇನೆ ಮತ್ತು ನಾನು ದೆಹಲಿ ಮಹಿಳಾ ಆಯೋಗದಲ್ಲಿ ಕೆಲಸ ಮಾಡುವಾಗ ಸಂಪೂರ್ಣ ತಟಸ್ಥ ರೀತಿಯಲ್ಲಿ ಕೆಲಸ ಮಾಡಿದ್ದೇನೆ ಎಂದರು.

ಬಿಜೆಪಿ ಕಡೆಯಿಂದ ನನಗೆ ಸಾಕಷ್ಟು ಬೆಂಬಲವೂ ಸಿಕ್ಕಿದೆ. ಆದ್ದರಿಂದ ಇಂದು ನಾನು ತುಂಬಾ ಭಾವುಕಳಾಗಿದ್ದೇನೆ. ಇದು ನನಗೆ ಬಹಳ ಮುಖ್ಯ ಮತ್ತು ಮಹತ್ವದ ದಿನ. ನಾನು ದೇವರಿಗೆ ತುಂಬಾ ಕೃತಜ್ಞಳಾಗಿದ್ದೇನೆ. ಇಡೀ ಬಿಜೆಪಿ ನಾಯಕತ್ವಕ್ಕೆ ನಾನು ತುಂಬಾ ಕೃತಜ್ಞಳಾಗಿದ್ದೇನೆ ಮತ್ತು ಈಗ ನಾನು ದೆಹಲಿಗಾಗಿ ಪೂರ್ಣ ಹೃದಯದಿಂದ ಕೆಲಸ ಮಾಡುತ್ತೇನೆ" ಎಂದು ಬಿಜೆಪಿ ಸೇರಿದ ಬಳಿಕ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದೇ ವೇಳೆ ಎಎಪಿ ಮತ್ತು ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ವಾಗ್ದಾಳಿ ನಡೆಸಿದ ಸ್ವಾತಿ ಮಲಿವಾಲ್ ಅವರು, ಕಳೆದ 10 ವರ್ಷಗಳಲ್ಲಿ ಅವರು ದುರಾಡಳಿತ ಮತ್ತು ಭ್ರಷ್ಟಾಚಾರವನ್ನು ಹರಡಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.