Exit polls: ದೀದಿಗೆ ಶಾಕ್; BJP ತೆಕ್ಕೆಗೆ ಬಂಗಾಳ; ಅಸ್ಸಾಂನಲ್ಲೂ ಕಮಲ ಮ್ಯಾಜಿಕ್!
ಕೇರಳ, ಪುದುಚೇರಿ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ವಿಧಾನಸಭೆ ಚುನಾವಣೆ ಮತದಾನ ಮುಕ್ತಾಯವಾಗಿದ್ದು ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆ ಇದೆ.

ನವದೆಹಲಿ: ಪಶ್ಚಿಮ ಬಂಗಾಳದಲ್ಲಿನ 2ನೇ ಹಂತದ ಮತದಾನ ಅಂತ್ಯವಾಗುತ್ತಲೇ ಚುನಾವಣೋತ್ತರ ಸಮೀಕ್ಷಾ ಫಲಿತಾಂಶ ಹೊರಬಿದಿದ್ದು, ಪಶ್ಚಿಮ ಬಂಗಾಳದಲ್ಲಿ ಹಾಲಿ ಸಿಎಂ ಮಮತಾ ಬ್ಯಾನರ್ಜಿಗೆ ಭಾರಿ ಹಿನ್ನಡೆಯಾಗಿದೆ. ಅಂತೆಯೇ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಹೌದು.. ಏಪ್ರಿಲ್ 9ರಂದು ಅಸ್ಸಾಂನ 126 ಕ್ಷೇತ್ರಗಳು, ಕೇರಳದ 140 ಕ್ಷೇತ್ರಗಳು ಮತ್ತು ಪುದುಚೇರಿಯ 30 ಕ್ಷೇತ್ರಗಳಿಗೆ ಏಕಕಾಲದಲ್ಲಿ ವಿಧಾನಸಭಾ ಚುನಾವಣೆ ನಡೆಯಿತು. ಏಪ್ರಿಲ್ 23ರಂದು ತಮಿಳುನಾಡಿನ ಎಲ್ಲಾ 234 ಕ್ಷೇತ್ರಗಳಿಗೆ ಮತದಾನ ನಡೆಯಿತು.
ಪಶ್ಚಿಮ ಬಂಗಾಳದಲ್ಲಿ 152 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಏಪ್ರಿಲ್ 23ರಂದು ನಡೆಯಿತು. ಎರಡನೇ ಮತ್ತು ಅಂತಿಮ ಹಂತದ ಮತದಾನ ಇಂದು ನಡೆಯಿತು. ಈ 5 ರಾಜ್ಯಗಳ ಚುನಾವಣಾ ಫಲಿತಾಂಶ ಮೇ 4ರಂದು ಹೊರಬೀಳಲಿದೆ.
ಕೇರಳ, ಪುದುಚೇರಿ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ವಿಧಾನಸಭೆ ಚುನಾವಣೆ ಮತದಾನ ಮುಕ್ತಾಯವಾಗಿದ್ದು, ಕೇರಳದಲ್ಲಿ ಎಲ್ ಡಿಎಫ್, ತಮಿಳುನಾಡಿನಲ್ಲಿ ಡಿಎಂಕೆ, ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಬಂಗಾಳದಲ್ಲಿ ಬಿಜೆಪಿ ಇತಿಹಾಸ
ಇನ್ನು ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ ನೆಪದಲ್ಲೇ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಹೇಳಲಾಗುತ್ತಿದೆ. ಹಾಲಿ ಲಭಿಸಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿ 4 ರಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಹೇಳಲಾಗಿದೆ.
ಮ್ಯಾಟ್ರಿಜ್, ಪ್ರಜಾ ಸಮೀಕ್ಷೆ, ಸಮೀಕ್ಷೆಯ ದಿನಚರಿ ಮತ್ತು ಚಾಣಕ್ಯ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿ ಅಧಿಕಾರದ ಗುದ್ದುಗೆ ಏರಲಿದೆ ಎಂದು ಹೇಳಲಾಗಿದೆ.
2011ರಿಂದಲೂ ಅಧಿಕಾರದಲ್ಲಿರುವ ಟಿಎಂಸಿ ಹಾಗೂ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನಡುವಣ ಜಿದ್ದಾಜಿದ್ದಿಗೆ ಸಾಕ್ಷಿಯಾಗಿರುವ ಪಶ್ಚಿಮ ಬಂಗಾಳದಲ್ಲಿ, ಬಿಜೆಪಿಗೆ ಅಧಿಕಾರ ಸಿಗಬಹುದು ಎಂಬುದು ಮತದಾನೋತ್ತರ ಸಮೀಕ್ಷೆಗಳ ಅಂದಾಜು ಆಗಿದೆ.
ಮ್ಯಾಟ್ರಿಜ್
ಬಿಜೆಪಿ: 146-161
ಟಿಎಂಸಿ: 125-140
ಇತರರು: 6-10
ಪ್ರಜಾ ಸಮೀಕ್ಷೆ
ಬಿಜೆಪಿ: 178-208
ಟಿಎಂಸಿ: 85-110
ಇತರರು: 0-5
ಪೋಲ್ ಡೈರಿ
ಬಿಜೆಪಿ: 142-171
ಟಿಎಂಸಿ: 99-127
ಇತರರು: 5-9
ಚಾಣಕ್ಯ
ಬಿಜೆಪಿ: 150-160
ಟಿಎಂಸಿ: 130-140
ಇತರರು: 6-10
ಎಕ್ಸಿಸ್ ಮೈ ಇಂಡಿಯಾ ಅಚ್ಚರಿ ಫಲಿತಾಂಶ
ಅಂತೆಯೇ ಬಹುತೇಕ ಸಮೀಕ್ಷೆಗಳು ಬಂಗಾಳದಲ್ಲಿ ಬಿಜೆಪಿಗೆ ಅಧಿಕಾರದ ಕುರಿತು ಊಹಿಸುತ್ತಿದ್ದರೆ ಎಕ್ಸಿಸ್ ಮೈ ಇಂಡಿಯಾ ಮಾತ್ರ ಅಚ್ಚರಿ ಮಾಹಿತಿ ನೀಡಿದೆ.
ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆಯು ಹಲವಾರು ಪ್ರಮುಖ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಪಕ್ಷಗಳೇ ಮತ್ತೆ ಅಧಿಕಾರಕ್ಕೇರುವ ಕುರಿತು ಮಾಹಿತಿ ನೀಡಿದೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಸುಮಾರು 190 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದ್ದು, ಭಾರತೀಯ ಜನತಾ ಪಕ್ಷವು ಸುಮಾರು 90 ಸ್ಥಾನಗಳನ್ನು ಗಳಿಸುವ ಮೂಲಕ 2ನೇ ಸ್ಥಾನ ಪಡೆಯುವ ಕುರಿತು ಮಾಹಿತಿ ನೀಡಿದೆ.
ಅಸ್ಸಾನಲ್ಲೂ ಬಿಜೆಪಿ ಮ್ಯಾಜಿಕ್
ಬಂಗಾಳ ಮಾತ್ರವಲ್ಲದೇ ಅಸ್ಸಾಂನಲ್ಲೂ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಊಹಿಸಿವೆ. ಒಟ್ಟು 7 ಚುನಾವಣೋತ್ತರ ಸಮೀಕ್ಷೆಗಳ ಪೈಕಿ ಏಳರಲ್ಲೂ ಅಸ್ಸಾಂನಲ್ಲಿ ಬಿಜೆಪಿಯೇ ಅಧಿಕಾರಿದಲ್ಲಿ ಮುಂದುವರೆಯಲಿದೆ ಎಂದು ಊಹಿಸಿವೆ. ಕಾಂಗ್ರೆಸ್ ಮೈತ್ರಿಕೂಟ 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಿದೆ ಎನ್ನಲಾಗಿದೆ.
ಎಕ್ಸಿಸ್ ಮೈ ಇಂಡಿಯಾ
ಬಿಜೆಪಿ: 88-100
ಕಾಂಗ್ರೆಸ್: 24-36
ಪೀಪಲ್ಸ್ ಇನ್ ಸೈಟ್
ಬಿಜೆಪಿ: 88-96
ಕಾಂಗ್ರೆಸ್: 30-34
ಇತರರು: 2-4
ಮ್ಯಾಟ್ರಿಜ್
ಬಿಜೆಪಿ: 85-95
ಕಾಂಗ್ರೆಸ್: 25-32
ಇತರರು: 6-12
ಜೆವಿಸಿ
ಬಿಜೆಪಿ: 88-101
ಕಾಂಗ್ರೆಸ್: 23-33
ಇತರರು: 2-3
ಪೀಪಲ್ ಪಲ್ಸ್
ಬಿಜೆಪಿ: 68-72
ಕಾಂಗ್ರೆಸ್: 22-26
ಎಐಯುಡಿಎಫ್: 3-5
ವೋಟ್ ವೈಬ್
ಬಿಜೆಪಿ: 90-100
ಕಾಂಗ್ರೆಸ್: 23-33
ಇತರರು: 0-6
ಪಿಮಾರ್ಕ್
ಬಿಜೆಪಿ: 82-94
ಕಾಂಗ್ರೆಸ್: 30-40
ಇತರರು: 1-5
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



