ಮಧ್ಯ ಪ್ರದೇಶ: ಪಿಕಪ್ ವ್ಯಾನ್ ಉರುಳಿ ಎಸ್‌ಯುವಿಗೆ ಡಿಕ್ಕಿ; 12 ಕಾರ್ಮಿಕರು ಸಾವು, 20 ಮಂದಿ ಗಾಯ
ಈ ಘಟನೆ ನಿನ್ನೆ ಬುಧವಾರ ರಾತ್ರಿ ಸುಮಾರು 8:30ಕ್ಕೆ ನಡೆದಿದೆ. ಚಿಕ್ಲಿಯಾ ಕ್ರಾಸಿಂಗ್‌ನಲ್ಲಿರುವ ರಿಲಯನ್ಸ್ ಇಂಡಸ್ಟ್ರೀಸ್ ಪೆಟ್ರೋಲ್ ಬಂಕ್ ಸಮೀಪ ಕಾರ್ಮಿಕರನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ನಿಯಂತ್ರಣ ತಪ್ಪಿ ಉರುಳಿದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಧಾರ್: ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಿನ್ನೆ ಬುಧವಾರ ರಾತ್ರಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಪಿಕಪ್ ವ್ಯಾನ್ ಉರುಳಿ, ನಂತರ ಎಸ್‌ಯುವಿ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 12 ಮಂದಿ (ಇವರಲ್ಲಿ 10 ಮಹಿಳೆಯರು ಮತ್ತು ಇಬ್ಬರು ಪುರುಷರು) ಮೃತಪಟ್ಟಿದ್ದು, ಇನ್ನೂ 20 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆ ನಿನ್ನೆ ಬುಧವಾರ ರಾತ್ರಿ ಸುಮಾರು 8:30ಕ್ಕೆ ನಡೆದಿದೆ. ಚಿಕ್ಲಿಯಾ ಕ್ರಾಸಿಂಗ್‌ನಲ್ಲಿರುವ ರಿಲಯನ್ಸ್ ಇಂಡಸ್ಟ್ರೀಸ್ ಪೆಟ್ರೋಲ್ ಬಂಕ್ ಸಮೀಪ ಕಾರ್ಮಿಕರನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ನಿಯಂತ್ರಣ ತಪ್ಪಿ ಉರುಳಿದ ಪರಿಣಾಮ ಈ ಅಪಘಾತ ಸಂಭವಿಸಿದೆ.
12 ಸಾವು, 20 ಮಂದಿಗೆ ಗಾಯ
ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು 35 ಮಂದಿ ಕಾರ್ಮಿಕರು ಬಗ್ಗಾಡ್‌ನಿಂದ ತಮ್ಮ ಮನೆಗಳಿಗೆ ಹಿಂದಿರುಗುತ್ತಿದ್ದರು. ಕ್ರಾಸಿಂಗ್ ಬಳಿ ಚಾಲಕ ನಿಯಂತ್ರಣ ಕಳೆದುಕೊಂಡ ಕಾರಣ ವಾಹನ ಉರುಳಿ, ನಂತರ ಎದುರಿನಿಂದ ಬರುತ್ತಿದ್ದ ಎಸ್‌ಯುವಿ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಹನ್ನೆರಡು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಇನ್ನೂ ಸುಮಾರು 20 ಮಂದಿ ಗಾಯಗೊಂಡಿದ್ದಾರೆ ಎಂದು ಧಾರ್ ಜಿಲ್ಲೆಯ ಉಸ್ತುವಾರಿ ಜಿಲ್ಲಾಧಿಕಾರಿ ಅಭಿಷೇಕ್ ಚೌಧರಿ ತಿಳಿಸಿದ್ದಾರೆ.
ಗಂಭೀರ ಗಾಯಾಳುಗಳನ್ನು ಇಂದೋರ್‌ಗೆ ರವಾನೆ
ಇನ್ನೊಂದೆಡೆ, ಹಲವಾರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ನಿವಾಸಿಗಳು ಮತ್ತು ಪೊಲೀಸರ ಸಹಾಯದಿಂದ ಅವರನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಕೆಲವರ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಪ್ರಾಥಮಿಕ ಚಿಕಿತ್ಸೆ ನಂತರ ಗಂಭೀರ ಗಾಯಾಳುಗಳನ್ನು ಇಂದೋರ್‌ಗೆ ಕಳುಹಿಸಲಾಗಿದೆ.
ತಿರ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಘಟನೆ ಕುರಿತು ತನಿಖೆ ಪ್ರಾರಂಭಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



