ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ 192, ಟಿಎಂಸಿಗೆ 100 ಸ್ಥಾನ: Today's Chanakya ಸಮೀಕ್ಷೆ!
ಬಿಜೆಪಿ 192 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಅದರ ಮಿತ್ರ ಪಕ್ಷಗಳು 11 ಸ್ಥಾನಗಳಲ್ಲಿ ಜಯ ದಾಖಲಿಸಲಿವೆ ಎಂದು ನಿಖರತೆಗೆ ಹೆಸರಾಗಿರುವ 'ಟುಡೇಸ್ ಚಾಣಕ್ಯ' ಭವಿಷ್ಯ ನುಡಿದಿದೆ.

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 192ಕ್ಕೂ ಅಧಿಕ ಸ್ಥಾನದಲ್ಲಿ ಗೆಲುವು ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಪಡೆದು ಅಧಿಕಾರ ಹಿಡಿಯಲಿದೆ ಎಂದು Today's Chanakya ಗುರುವಾರ ಮತದಾನೋತ್ತರ ಸಮೀಕ್ಷೆಯಲ್ಲಿ ತಿಳಿಸಿದೆ.
ಬಿಜೆಪಿ 192 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಅದರ ಮಿತ್ರ ಪಕ್ಷಗಳು 11 ಸ್ಥಾನಗಳಲ್ಲಿ ಜಯ ದಾಖಲಿಸಲಿವೆ ಎಂದು ನಿಖರತೆಗೆ ಹೆಸರಾಗಿರುವ 'ಟುಡೇಸ್ ಚಾಣಕ್ಯ' ಭವಿಷ್ಯ ನುಡಿದಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 100 ಸ್ಥಾನಗಳಲ್ಲಿ, ಅದರ ಮಿತ್ರ ಪಕ್ಷಗಳು 11 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಎರಡನೇ ಸ್ಥಾನ ಪಡೆಯಲಿವೆ. ಇತರರು ನಾಲ್ಕು ಸ್ಥಾನಗಳಲ್ಲಿ ಗೆಲುವು ಪಡೆಯಬಹುದು ಎಂದು ಅಂದಾಜಿಸಿದೆ.
ಇನ್ನೂ ಮತಗಳ ಹಂಚಿಕೆಯಲ್ಲಿ ಬಿಜೆಪಿ ಶೇ. 48, ಟಿಎಂಸಿ ಶೇ. 38 ಮತ್ತು ಇತರರು ಶೇ.14 ರಷ್ಟು ಮತಗಳನ್ನು ಪಡೆಯಲಿವೆ ಎನ್ನಲಾಗಿದೆ.
294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಹುಮತ ಪಡೆಯಲು 148 ಸ್ಥಾನಗಳನ್ನು ಗೆಲ್ಲಬೇಕಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



