ದೇಶ

'ದಾರಿತಪ್ಪಿದ ಮಕ್ಕಳನ್ನು' ಕ್ಷಮಿಸಬೇಕು: ಪ್ರಧಾನಿ ಮೋದಿ ಹೊಸ ವಿಡಿಯೋಗೆ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ರಿಯಾಕ್ಷನ್ ಏನು? Video

ಕೇವಲ ರೀಲ್ ನಲ್ಲಿ ಮಾತ್ರ ಕ್ಷಮಿಸುತ್ತೀರಾ ಅಥವಾ ಕೇಸ್ ಗಳನ್ನು ಕೂಡಾ ಹಿಂಪಡೆಯುವಿರಾ? ಎಂದು ಪ್ರಶ್ನಿಸಿದ್ದಾರೆ.

'ದಾರಿತಪ್ಪಿದ ಮಕ್ಕಳನ್ನು' ಕ್ಷಮಿಸಬೇಕು: ಪ್ರಧಾನಿ ಮೋದಿ ಹೊಸ ವಿಡಿಯೋಗೆ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ರಿಯಾಕ್ಷನ್ ಏನು? Video
ಅಭಿಜಿತ್ ದೀಪ್ಕೆ, ಪ್ರಧಾನಿ ಮೋದಿ ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಪ್ರಧಾನಿ ಮೋದಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಮತ್ತೊಂದು ವಿಡಿಯೊ ಸಂದೇಶವೊಂದನ್ನು ಹಂಚಿಕೊಂಡಿದ್ದು, ಜಂತರ್ ಮಂತರ್ ಪ್ರತಿಭಟನೆಯ ವೇಳೆ ತಮ್ಮ ಹಾಗೂ ತಮ್ಮ ದಿವಂಗತ ತಾಯಿಯನ್ನು ನಿಂದಿಸಿದ ವಿದ್ಯಾರ್ಥಿಗಳನ್ನು ಕ್ಷಮಿಸುತ್ತಿರುವುದಾಗಿ ಹೇಳಿದ್ದಾರೆ.

ಕಾನೂನು ಕ್ರಮವೇ ಸಮಸ್ಯೆಗೆ ಪರಿಹಾರವಲ್ಲ. ದಾರಿತಪ್ಪಿದ ಮಕ್ಕಳಿಗೆ ಸರಿಯಾದ ದಾರಿ ತೋರಿಸಬೇಕು ಎಂದು ಹೇಳಿದ್ದಾರೆ. ಈ ಪೋಸ್ಟ್ ಗೆ ಪ್ರತಿಕ್ರಿಯಿಸಿರುವ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆ, ಸರ್, ಕೇವಲ ರೀಲ್ ನಲ್ಲಿ ಮಾತ್ರ ಕ್ಷಮಿಸುತ್ತೀರಾ ಅಥವಾ ಕೇಸ್ ಗಳನ್ನು ಕೂಡಾ ಹಿಂಪಡೆಯುವಿರಾ? ಎಂದು ಪ್ರಶ್ನಿಸಿದ್ದಾರೆ.

ಇದಕ್ಕೂ ಮುನ್ನಾ ಪ್ರಧಾನಿ ಮೋದಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ಹಿನ್ನೆಲೆಯಲ್ಲಿ ನೋಯ್ಡಾದ ಹದಿಹರೆಯದ ಯುವತಿ ಮೇಲಿನ ಎಫ್ ಐಆರ್ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋ ಪೋಸ್ಟ್ ವೊಂದನ್ನು ಅಭಿಜಿತ್ ದೀಪ್ಕಿ ಮಾಡಿದ್ದರು.

ಇಷ್ಟು ವರ್ಷಗಳ ಕಾಲ ಮಹಿಳೆಯರನ್ನು ಅತ್ಯಂತ ಹೀನಾಯವಾಗಿ ನಿಂದಿಸಿರುವ ಬಿಜೆಪಿ ಐಟಿ (IT) ಸೆಲ್ ಸದಸ್ಯರ ವಿರುದ್ಧವೂ ಎಫ್‌ಐಆರ್ (FIR) ದಾಖಲಿಸಲಾಗುತ್ತದೆಯೇ? ಎಂದು ಪ್ರಧಾನಿ ಮೋದಿ ಅವರನ್ನು ಕೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.