ಖೈಬರ್ ಪಖ್ತುಂಖ್ವಾ: 'ಶಾಂತಿ ರ‍್ಯಾಲಿ' ವೇಳೆ ಆತ್ಮಹತ್ಯಾ ಬಾಂಬ್ ದಾಳಿ; 13 ಸಾವು
ಸ್ವಾತ್ ಜಿಲ್ಲೆಯ ಪಟ್ಟಣದಲ್ಲಿ "ಶಾಂತಿ ರ‍್ಯಾಲಿ" ನಡೆಯುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಸ್ಫೋಟ ಆತ್ಮಹತ್ಯಾ ದಾಳಿಯಂತೆ ಕಂಡುಬಂದಿದೆ, ಆದರೆ ಅದರ ಬಗ್ಗೆ ತಕ್ಷಣದ ಅಧಿಕೃತ ದೃಢೀಕರಣವಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಖೈಬರ್ ಪಖ್ತುಂಖ್ವಾ: ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಇಂದು ಪಾಕಿಸ್ತಾನಿ ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಡೆದ ಸ್ಫೋಟದಲ್ಲಿ ಹದಿಮೂರು ಜನರು ಸಾವನ್ನಪ್ಪಿದ್ದು, 22 ಜನರು ಗಾಯಗೊಂಡಿದ್ದಾರೆ. ಸ್ಫೋಟದ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿವೆ.
ಸ್ವಾತ್ ಜಿಲ್ಲೆಯ ಪಟ್ಟಣದಲ್ಲಿ "ಶಾಂತಿ ರ‍್ಯಾಲಿ" ನಡೆಯುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಸ್ಫೋಟ ಆತ್ಮಹತ್ಯಾ ದಾಳಿಯಂತೆ ಕಂಡುಬಂದಿದೆ, ಆದರೆ ಅದರ ಬಗ್ಗೆ ತಕ್ಷಣದ ಅಧಿಕೃತ ದೃಢೀಕರಣವಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಸ್ಥಳೀಯ ಬುಡಕಟ್ಟು ಮಂಡಳಿ ಸ್ವಾತ್ ಅಮಾನ್ ಜಿರ್ಗಾ ಈ ರ‍್ಯಾಲಿಯನ್ನು ಆಯೋಜಿಸಿತ್ತು, ಇದರಲ್ಲಿ ಭಾಗವಹಿಸುವವರು ಘೋಷಣೆಗಳನ್ನು ಕೂಗುತ್ತಾ ಮತ್ತು ಕಳೆದ ಕೆಲವು ತಿಂಗಳುಗಳಿಂದ ಭದ್ರತಾ ಪರಿಸ್ಥಿತಿ ಹದಗೆಟ್ಟಿರುವ ಪ್ರದೇಶದಲ್ಲಿ ಶಾಂತಿ ನೆಲೆಸಬೇಕೆಂದು ಒತ್ತಾಯಿಸುವ ಫಲಕಗಳನ್ನು ಹಿಡಿದುಕೊಂಡು ಓಡಾಡುತ್ತಿದ್ದರು.
ರಕ್ಷಣಾ ತಂಡಗಳು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ದವು; ಪೊಲೀಸರು ಮತ್ತು ಇತರ ಕಾನೂನು ಜಾರಿ ಸಂಸ್ಥೆಗಳು ಪ್ರದೇಶದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಯತ್ನಿಸುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



