ಜಂತರ್ ಮಂತರ್ ಪ್ರತಿಭಟನೆ ಎಫೆಕ್ಟ್: ಆಗಸ್ಟ್ 6 ರಂದು Gen Z, Gen ಆಲ್ಫಾ ಜೊತೆ RSS ಮುಖ್ಯಸ್ಥ ಮೋಹನ್ ಭಾಗವತ್ ಸಂವಾದ
ಪ್ರಕಟಣೆಯ ಪ್ರಕಾರ, ಮುಂಬೈನ ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್‌ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಮ್ಮೇಳನದಲ್ಲಿ ದೇಶದ 100ಕ್ಕೂ ಹೆಚ್ಚು ನಗರಗಳ 15ರಿಂದ 19 ವರ್ಷದೊಳಗಿನ 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಮುಂಬೈ: ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ನೇತೃತ್ವದ ವಿದ್ಯಾರ್ಥಿಗಳ ಪ್ರತಿಭಟನೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸುತ್ತಿರುವ ಬೆನ್ನಲ್ಲೇ, ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಆಗಸ್ಟ್ 6 ರಂದು ಜೆನ್ ಝಿ ಮತ್ತು ಜೆನ್ ಆಲ್ಫಾ ಜೊತೆ ಸಂವಾದ ನಡೆಸಲಿದ್ದಾರೆ.
ಪ್ರಕಟಣೆಯ ಪ್ರಕಾರ, ಮುಂಬೈನ ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್‌ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಮ್ಮೇಳನದಲ್ಲಿ ದೇಶದ 100ಕ್ಕೂ ಹೆಚ್ಚು ನಗರಗಳ 15ರಿಂದ 19 ವರ್ಷದೊಳಗಿನ 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಭಾರತದ ಅಂತರರಾಷ್ಟ್ರೀಯ ಏಕೀಕರಣ ರಾಷ್ಟ್ರಗಳ ಚಳುವಳಿ(ಐಐಎಂಯುಎನ್) 15 ನೇ ವಾರ್ಷಿಕೋತ್ಸವದ ಅಂಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
"ನಾಯಕತ್ವ ಎಂದರೆ ಮುಂದಿನ ಪೀಳಿಗೆಗೆ ಮಾರ್ಗದರ್ಶನ ನೀಡುವುದಷ್ಟೇ ಅಲ್ಲ, ಅವರ ಮಾತುಗಳನ್ನು ಆಲಿಸುವುದೂ ಆಗಿದೆ. ಈ ಮಹತ್ವದ ಘಟ್ಟದಲ್ಲಿ ಇಂತಹ ಸಂವಾದ ಈಗ ಹಿಂದೆಂದಿಗಿಂತಲೂ ಹೆಚ್ಚು ಅಗತ್ಯವಾಗಿದೆ. ನಮ್ಮ ಆಹ್ವಾನವನ್ನು ಸ್ವೀಕರಿಸಿ ಈ ಸಮಾವೇಶಕ್ಕೆ ಆಗಮಿಸಲು ಸಮ್ಮತಿಸಿದ ಮೋಹನ್ ಭಾಗವತ್ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ" ಎಂದು ಐಐಎಂಯುಎನ್ ಸಂಸ್ಥಾಪಕ ರಿಷಭ್ ಶಾ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



