Videoದಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಲೇ ಸರ್ಕಾರಿ ಕೆಲಸಕ್ಕೆ ಗುಡ್ಬೈ ಹೇಳಿದ ಶಿಕ್ಷಕಿ! ಇಲ್ಲಿದೆ ಅಸಲಿ ಕಾರಣ...
ಶಿಕ್ಷಕಿ ಭೂಕ್ಯ ಗೌತಮಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಭಾವನಾತ್ಮಕ ವಿಡಿಯೋದಲ್ಲಿ ಕಣ್ಣೀರಿಡುತ್ತಲೇ ರಾಜೀನಾಮೆ ಘೋಷಿಸಿದ್ದಾರೆ.

ಇನ್‌ಸ್ಟಾಗ್ರಾಮ್ ರೀಲ್‌ಗಳು, ಖಾಸಗಿ ಶಾಲೆಯ ಬಗ್ಗೆ ಪ್ರಚಾರ ಮಾಡಿದ ಆರೋಪ ಮತ್ತು ತಿಂಗಳುಗಳ ಕಾಲ ಟೀಕೆ ಹಾಗೂ ಟ್ರೋಲಿಂಗ್‌ಗಳಿಂದಾಗಿ ಅಮಾನತುಗೊಂಡಿದ್ದ ತೆಲಂಗಾಣದ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ಸುಮಾರು 12 ವರ್ಷಗಳಿಂದ ತಾನು ಪ್ರೀತಿಸುತ್ತಿದ್ದ ವೃತ್ತಿಗೆ ಕೊನೆಗೂ ಗುಡ್ಬೈ ಹೇಳಿದ್ದಾರೆ.
ತೆಲಂಗಾಣದ ಖಮ್ಮಮ್ ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು, ಇನ್‌ಸ್ಟಾಗ್ರಾಮ್ ರೀಲ್ಸ್ ಗಳ ಮೂಲಕ ಖಾಸಗಿ ಶಾಲೆಯ ಬಗ್ಗೆ ಪ್ರಚಾರ ಮಾಡಿದ ಆರೋಪದ ಮೇಲೆ ಅಮಾನತುಗೊಂಡಿದ್ದರು. ಇದೀಗ ವಿಡಿಯೋದಲ್ಲಿ ಕಣ್ಣೀರಿಡುತ್ತಲೇ ರಾಜೀನಾಮೆ ನೀಡಿರುವುದು ಸದ್ಯ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಖಮ್ಮಮ್‌ನ ಮಾಮಿಲಗುಡೆಮ್ ಹೈಸ್ಕೂಲ್‌ನಲ್ಲಿ ಇಂಗ್ಲಿಷ್ ಶಿಕ್ಷಕಿಯಾಗಿದ್ದ ಭೂಕ್ಯ ಗೌತಮಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಭಾವನಾತ್ಮಕ ವಿಡಿಯೋದಲ್ಲಿ ಕಣ್ಣೀರಿಡುತ್ತಲೇ ರಾಜೀನಾಮೆ ಘೋಷಿಸಿದ್ದಾರೆ. ವಿಡಿಯೋದಲ್ಲಿ, ವಿವಾದದ ನಂತರದ ಟೀಕೆ, ಅವಮಾನ ಮತ್ತು ಒತ್ತಡವನ್ನು ಇನ್ನು ಮುಂದೆ ನಿಭಾಯಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಇನ್‌ಸ್ಟಾಗ್ರಾಮ್ ನಲ್ಲಿ ಖಾಸಗಿ ಶಾಲೆ ಬಗ್ಗೆ ಪ್ರಚಾರ
ಸಾಮಾಜಿಕ ಮಾಧ್ಯಮದ ಮೂಲಕ ಖಾಸಗಿ ಶಾಲೆಯಲ್ಲಿ ಪ್ರವೇಶವನ್ನು ಉತ್ತೇಜಿಸಿದ ಮತ್ತು ಸರ್ಕಾರಿ ಶಾಲೆಯಲ್ಲಿ ತನ್ನ ಕರ್ತವ್ಯ ನಿರ್ಲಕ್ಷಿಸಿದ ಆರೋಪದ ಮೇಲೆ ಶಿಕ್ಷಣ ಅಧಿಕಾರಿಗಳು ಅವರನ್ನು ಅಮಾನತುಗೊಳಿಸಿದ್ದರು.
ತಮ್ಮ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯಿಸಿದ ಶಿಕ್ಷಕಿ, ವಿವಾದದ ಕೇಂದ್ರಬಿಂದುವಾಗಿರುವ ರೀಲ್‌ಗಳನ್ನು ಶಾಲಾ ಸಮಯದಲ್ಲಿ ಮಾಡಿಲ್ಲ. ಬದಲಾಗಿ ತಮ್ಮ ಮನೆಯಲ್ಲಿ ರೆಕಾರ್ಡ್ ಮಾಡಲಾಗಿದೆ ಎಂದು ಹೇಳಿದ್ದಾರೆ. ನಾನು ನನ್ನ ಜವಾಬ್ದಾರಿಗಳನ್ನು ಎಂದಿಗೂ ನಿರ್ಲಕ್ಷಿಸಿಲ್ಲ ಮತ್ತು ಸುಮಾರು 12 ವರ್ಷಗಳ ಕಾಲ ಶಿಕ್ಷಕಿಯಾಗಿ ಸಮರ್ಪಣಾಭಾವದಿಂದ ಸೇವೆ ಸಲ್ಲಿಸಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



