2013ರ ಅತ್ಯಾಚಾರ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜಪಾಲ್ ದೋಷಿ; ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು..!
2013ರ ನವೆಂಬರ್‌ನಲ್ಲಿ ಗೋವಾದ ರೆಸಾರ್ಟ್‌ನಲ್ಲಿ ನಡೆದ ತೆಹಲ್ಕಾ ಮ್ಯಾಗಜಿನ್‌ನ ವಾರ್ಷಿಕ 'ಥಿಂಕ್‌ಫೆಸ್ಟ್' ಕಾರ್ಯಕ್ರಮದ ವೇಳೆ, ಲಿಫ್ಟ್‌ನೊಳಗೆ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಪಣಜಿ (ಗೋವಾ): ರಾಷ್ಟ್ರಮಟ್ಟದಲ್ಲಿ ಭಾರಿ ಸಂಚಲನ ಮೂಡಿಸಿದ್ದ 2013ರ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ‘ತೆಹೆಲ್ಕಾ’ ನಿಯತಕಾಲಿಕೆಯ ಮಾಜಿ ಮುಖ್ಯ ಸಂಪಾದಕ ತರುಣ್ ತೇಜಪಾಲ್ ಅವರನ್ನು ದೋಷಿ ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ 2021ರಲ್ಲಿ ಕೆಳ ಹಂತದ ಸೆಷನ್ಸ್ ನ್ಯಾಯಾಲಯ ನೀಡಿದ್ದ ಖುಲಾಸೆ ಆದೇಶವನ್ನು ಹೈಕೋರ್ಟ್ ಸಂಪೂರ್ಣವಾಗಿ ರದ್ದುಗೊಳಿಸಿದೆ
ನ್ಯಾಯಮೂರ್ತಿಗಳಾದ ನೀಲಾ ಗೋಖಲೆ ಮತ್ತು ಅಮಿತ್ ಜಮ್ಸಾಂಡೇಕರ್ ಅವರಿದ್ದ ಗೋವಾ ಪೀಠವು ತೇಜ್‌ಪಾಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣದ ಕುರಿತು ಆದೇಶವನ್ನು ಬಳಿಕ ಪ್ರಕಟಿಸಲಾಗುವುದು ಎಂದು ತಿಳಿಸಿದೆ.
2013ರ ನವೆಂಬರ್‌ನಲ್ಲಿ ಗೋವಾದ ರೆಸಾರ್ಟ್‌ನಲ್ಲಿ ನಡೆದ ತೆಹಲ್ಕಾ ಮ್ಯಾಗಜಿನ್‌ನ ವಾರ್ಷಿಕ 'ಥಿಂಕ್‌ಫೆಸ್ಟ್' ಕಾರ್ಯಕ್ರಮದ ವೇಳೆ, ಲಿಫ್ಟ್‌ನೊಳಗೆ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾಜಿ ಮಹಿಳಾ ಉದ್ಯೋಗಿಯೊಬ್ಬರು ತರುಣ್ ತೇಜ್‌ಪಾಲ್ ವಿರುದ್ಧ ಆರೋಪಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ಗೋವಾ ನ್ಯಾಯಾಲಯದ ಖುಲಾಸೆ ಆದೇಶವನ್ನು ರದ್ದುಪಡಿಸಿ, ತರುಣ್ ತೇಜ್‌ಪಾಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.
ಪ್ರಕರಣಗಲ್ಲಿ ತರುಣ್ ತೇಜ್ ಪಾಲ್ ಅವರು ದೋಷಿ ಎಂದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 376 ಅಡಿ ತೇಜ್‌ಪಾಲ್ ಅವರಿಗೆ ಕನಿಷ್ಠ 10 ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆಯವರೆಗೆ ವಿಧಿಸುವ ಅವಕಾಶವಿದೆ.
ಈ ನಡುವೆ ಶಿಕ್ಷೆಯ ಪ್ರಮಾಣದ ವಿಚಾರಣೆಯ ವೇಳೆ ತೇಜ್‌ಪಾಲ್ ಪರ ಹಿರಿಯ ವಕೀಲ ಆಬಾದ್ ಪೊಂಡಾ, ಕನಿಷ್ಠ ಶಿಕ್ಷೆ ವಿಧಿಸುವಂತೆ ನ್ಯಾಯಾಲಯವನ್ನು ಕೋರಿದರು.
ಮತ್ತೊಂದೆಡೆ, ಗೋವಾ ಸರ್ಕಾರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, "‘ಇಲ್ಲ’ ಎಂದರೆ ‘ಇಲ್ಲ’ ಎಂಬ ಸಂದೇಶ ಸಮಾಜಕ್ಕೆ ಸ್ಪಷ್ಟವಾಗಿ ತಲುಪಬೇಕು" ಎಂದು ವಾದಿಸಿ ಗರಿಷ್ಠ ಶಿಕ್ಷೆ ವಿಧಿಸುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು.
ನ್ಯಾಯಾಲಯದಲ್ಲಿ ಹಾಜರಿದ್ದ ತರುಣ್ ತೇಜ್‌ಪಾಲ್, ತಾನು "ರಾಜಕೀಯ ದ್ವೇಷಕ್ಕೆ ಗುರಿಯಾದ ವ್ಯಕ್ತಿ" ಎಂದು ಹೇಳಿ, ತನಗೆ ಇಬ್ಬರು ಪುತ್ರಿಯರಿದ್ದು ಶಿಕ್ಷೆಯಲ್ಲಿ ವಿನಾಯಿತಿ ನೀಡುವಂತೆ ಮನವಿ ಮಾಡಿದರು.
ಸುಪ್ರೀಂಕೋರ್ಟ್ ಮೆಟ್ಟಿಲೇರಲು ತೇಜ್‌ಪಾಲ್ ನಿರ್ಧಾರ
ಈ ನಡುವೆ ತೀರ್ಪಿನ ಬಳಿಕ ಪ್ರತಿಕ್ರಿಯಿಸಿದ ತಹಲ್ಕಾ ಪತ್ರಿಕೆಯ ತರುಣ್ ತೇಜ್‌ಪಾಲ್, ಈ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ತಿಳಿಸಿದ್ದಾರೆ.
ಈ ಆದೇಶದ ವಿರುದ್ಧ ನಾವು ಮೇಲ್ಮನವಿ ಸಲ್ಲಿಸುತ್ತೇವೆ. ಈ ತೀರ್ಪು ಸರಿಯಲ್ಲ ಎಂದು ನಾವು ನಂಬಿದ್ದೇವೆ. ಹೀಗಾಗಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಲಿದ್ದೇವೆ ಎಂದು ಹೇಳಿದ್ದಾರೆ.
ಏನಿದು ಪ್ರಕರಣ..?
2013ರ ನವೆಂಬರ್‌ನಲ್ಲಿ ಗೋವಾದಲ್ಲಿ ನಡೆದ ತೆಹಲ್ಕಾ 'ಥಿಂಕ್‌ಫೆಸ್ಟ್' ಕಾರ್ಯಕ್ರಮದ ವೇಳೆ, ಹೋಟೆಲ್ ಲಿಫ್ಟ್‌ನೊಳಗೆ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ತೇಜ್‌ಪಾಲ್ ಅವರ ಮಾಜಿ ಕಿರಿಯ ಸಹೋದ್ಯೋಗಿಯೊಬ್ಬರು ಆರೋಪಿಸಿದ್ದರು.
ಈ ಪ್ರಕರಣದಲ್ಲಿ 2021ರಲ್ಲಿ ಗೋವಾ ಸೆಷನ್ಸ್ ನ್ಯಾಯಾಲಯ ತೇಜ್‌ಪಾಲ್ ಅವರನ್ನು ಖುಲಾಸೆಗೊಳಿಸಿತ್ತು. ಆದರೆ, ಆ ತೀರ್ಪನ್ನು ಪ್ರಶ್ನಿಸಿ ಗೋವಾ ಸರ್ಕಾರ ಬಾಂಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಹೈಕೋರ್ಟ್ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿ, ತೇಜ್‌ಪಾಲ್ ಅವರನ್ನು ದೋಷಿ ಎಂದು ಘೋಷಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



