ದೇಶ

ದಳಪತಿ ದಾಂಪತ್ಯದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ತಮಿಳುನಾಡು ಸಿಎಂ ವಿಜಯ್ ಪತ್ನಿ ಸಂಗೀತಾ; ಪ್ರಕರಣ ಇತ್ಯರ್ಥ

ತಮಿಳುನಾಡಿನ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಸಂಗೀತಾ ಅವರು ಇಂದು ಹಿಂತೆಗೆದುಕೊಂಡಿದ್ದು, ಕೋರ್ಟ್ ಪ್ರಕರಣವನ್ನು ಇತ್ಯರ್ಥಪಡಿಸಿದೆ.

ದಳಪತಿ ದಾಂಪತ್ಯದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ತಮಿಳುನಾಡು ಸಿಎಂ ವಿಜಯ್ ಪತ್ನಿ ಸಂಗೀತಾ; ಪ್ರಕರಣ ಇತ್ಯರ್ಥ
ವಿಜಯ್ ಮತ್ತು ಪತ್ನಿ ಸಂಗೀತಾ
Published On :

ಚೆನ್ನೈ: ತಮಿಳಿಗ ವೆಟ್ರಿ ಕಳಗಂ(TVK) ಪಕ್ಷದ ಸಂಸ್ಥಾಪಕ ಹಾಗೂ ತಮಿಳುನಾಡು ಮುಖ್ಯಮಂತ್ರಿ​ ದಳಪತಿ ವಿಜಯ್​ ದಾಂಪತ್ಯ ದೊಡ್ಡ ತಿರುವು ಪಡೆದುಕೊಂಡಿದ್ದು, ನಟನ ಪತ್ನಿ ಸಂಗೀತಾ ಅವರು ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನಕ್ಕೆ ಅರ್ಜಿಯನ್ನು ಹಿಂಪಡೆದಿದ್ದಾರೆ.

ತಮಿಳುನಾಡಿನ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಸಂಗೀತಾ ಅವರು ಇಂದು ಹಿಂತೆಗೆದುಕೊಂಡಿದ್ದು, ಕೋರ್ಟ್ ಪ್ರಕರಣವನ್ನು ಇತ್ಯರ್ಥಪಡಿಸಿದೆ.

ಈ ವಿಚ್ಛೇದನ ಅರ್ಜಿ ತಮಿಳುನಾಡು ರಾಜಕೀಯ ಮತ್ತು ಸಿನಿ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ನಟಿ ತ್ರಿಷಾ ಕೃಷ್ಣನ್​ ಹೆಸರು ಕೂಡ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ದಂಪತಿಗಳು ಮತ್ತೆ ಒಂದಾಗುವ ಸೂಚನೆ ನೀಡಿದ್ದು, ಪ್ರಕರಣ ಸುಖಾಂತ್ಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.