Onam: ಮದ್ಯ-ಮಾದಕ ವಸ್ತುಗಳ ಅಕ್ರಮ ಹರಿವಿಗೆ ಕೇರಳ ಸರ್ಕಾರ ಬ್ರೇಕ್; ಗೃಹ ಸಚಿವ Chennithala ಹೇಳಿದ್ದೇನು?
ಮಾದಕ ವಸ್ತುಗಳ ವಿರುದ್ಧ ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಅದನ್ನು ವಿರೋಧಿಸಬೇಕು ಎಂದು ಗೃಹ ಸಚಿವರು ಕರೆ ನೀಡಿದ್ದಾರೆ.

ತಿರುವನಂತಪುರಂ: ಓಣಂ ಹಬ್ಬದ ಸಂದರ್ಭದಲ್ಲಿ ಕೇರಳಕ್ಕೆ ಅಕ್ರಮವಾಗಿ ಮದ್ಯ ಹಾಗೂ ಮಾದಕ ವಸ್ತುಗಳು ಹರಿದುಬರುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ರಾಜ್ಯದ ಗೃಹ ಸಚಿವ ರಮೇಶ್ ಚೆನ್ನಿತ್ತಲ ಭಾನುವಾರ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ರಾಜ್ಯದ ಅಬಕಾರಿ ಸಚಿವ ಎಂ. ಲಿಜು ಅವರು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ ಎಂದು ಚೆನ್ನಿತ್ತಲ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಮಾದಕ ವಸ್ತುಗಳು ಸಮಾಜ ಮತ್ತು ಅದರ ಜನರ ಬದುಕನ್ನು ನಾಶಪಡಿಸುತ್ತವೆ. ಹೀಗಾಗಿ ಸಾರ್ವಜನಿಕರು ಈ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕು. ಮಾದಕ ವಸ್ತುಗಳ ವಿರುದ್ಧ ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಅದನ್ನು ವಿರೋಧಿಸಬೇಕು ಎಂದು ಗೃಹ ಸಚಿವರು ಕರೆ ನೀಡಿದ್ದಾರೆ.
ಈ ವರ್ಷದ ಓಣಂ ಸುಗ್ಗಿ ಹಬ್ಬದ ಪ್ರಮುಖ ದಿನ ಆಗಸ್ಟ್ 26ರಂದು ನಡೆಯಲಿದೆ.
ಹಬ್ಬದ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಸಾಗಾಟ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅಬಕಾರಿ ಇಲಾಖೆಗೆ ಸೂಚನೆ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



