ದೇಶ

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಕರ್ನಾಟಕದ 6 ಕಾರ್ಮಿಕರು ಸೇರಿ 9 ಮಂದಿ ದುರ್ಮರಣ

ಸಂಗಾರೆಡ್ಡಿ ಜಿಲ್ಲೆಯ ಮೊಗ್ಡಂಪಲ್ಲಿ ಮಂಡಲದ ಸತ್ವಾರ್ ಗ್ರಾಮದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ 65 ರಲ್ಲಿ ಗಂಭೀರ ಅಪಘಾತ ಸಂಭವಿಸಿದೆ. ತೈಲ ಟ್ಯಾಂಕರ್ ಆಟೋಗೆ ಡಿಕ್ಕಿ ಹೊಡೆದು ಆರು ಜನರು ಸಾವನ್ನಪ್ಪಿದ್ದಾರೆ. ಇತರ ಮೂವರು ಗಾಯಗೊಂಡಿದ್ದಾರೆ.

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಕರ್ನಾಟಕದ 6 ಕಾರ್ಮಿಕರು ಸೇರಿ 9 ಮಂದಿ ದುರ್ಮರಣ
ತೆಲಂಗಾಣ ಅಪಘಾತ
Published On :

ಮೊಗ್ಡಂಪಲ್ಲಿ: ಸಂಗಾರೆಡ್ಡಿ ಜಿಲ್ಲೆಯ ಮೊಗ್ಡಂಪಲ್ಲಿ ಮಂಡಲದ ಸತ್ವಾರ್ ಗ್ರಾಮದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ 65 ರಲ್ಲಿ ಗಂಭೀರ ಅಪಘಾತ ಸಂಭವಿಸಿದೆ. ತೈಲ ಟ್ಯಾಂಕರ್ ಆಟೋಗೆ ಡಿಕ್ಕಿ ಹೊಡೆದು ಆರು ಜನರು ಸಾವನ್ನಪ್ಪಿದ್ದಾರೆ. ಇತರ ಮೂವರು ಗಾಯಗೊಂಡಿದ್ದಾರೆ.

ಮೃತರನ್ನು ಕರ್ನಾಟಕದ ಬೀದರ್ ನ ರಾಜಗಿರಾ ಗ್ರಾಮದ ನಿವಾಸಿಗಳು ಎಂದು ಪೊಲೀಸರು ಗುರುತಿಸಿದ್ದಾರೆ. ಈ ರಸ್ತೆ ಅಪಘಾತ ಸಂಭವಿಸಿದಾಗ ಒಟ್ಟು 12 ಜನರು ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಗಂಭೀರವಾಗಿ ಗಾಯಗೊಂಡ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಗಾರೆಡ್ಡಿ ಜಿಲ್ಲೆಯಲ್ಲಿ ಮತ್ತೊಂದು ರಸ್ತೆ ಅಪಘಾತ

ಸಂಗಾರೆಡ್ಡಿ ಜಿಲ್ಲೆಯಲ್ಲಿ ಮತ್ತೊಂದು ರಸ್ತೆ ಅಪಘಾತ ಸಂಭವಿಸಿದೆ. ಮೂರು ಕಾರುಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಕೊಹಿರ್ ಮಂಡಲದ ಕವೇಲಿಯಲ್ಲಿ ಈ ಅಪಘಾತ ಸಂಭವಿಸಿದೆ. ಇದರೊಂದಿಗೆ, ಸಂಗರೆಡ್ಡಿ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 9 ಜನರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.