ದೇಶ

ನೀಟ್ ರದ್ದುಗೊಳಿಸುವಂತೆ ಆಗ್ರಹಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ತಮಿಳುನಾಡು ಆರೋಗ್ಯ ಸಚಿವ ಕೆ ಜಿ ಅರುಣ್‌ರಾಜ್ ಅವರು ನೀಟ್ ವಿರುದ್ಧ ಇಂದು ನಿರ್ಣಯ ಮಂಡಿಸಿದ್ದು, ನೀಟ್ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ.

ನೀಟ್ ರದ್ದುಗೊಳಿಸುವಂತೆ ಆಗ್ರಹಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ
ತಮಿಳುನಾಡು ವಿಧಾನಸಭೆ
Published On :

ಚೆನ್ನೈ: ಕೇಂದ್ರ ಸರ್ಕಾರ ತಕ್ಷಣವೇ ನೀಟ್ ಅನ್ನು ರದ್ದುಗೊಳಿಸಿ 12ನೇ ತರಗತಿಯ ಅಂಕಗಳ ಆಧಾರದ ಮೇಲೆ ಯುಜಿ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ನೀಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದೆ.

ತಮಿಳುನಾಡು ಆರೋಗ್ಯ ಸಚಿವ ಕೆ ಜಿ ಅರುಣ್‌ರಾಜ್ ಅವರು ನೀಟ್ ವಿರುದ್ಧ ಇಂದು ನಿರ್ಣಯ ಮಂಡಿಸಿದ್ದು, ನೀಟ್ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿದಂತೆ ರಾಜ್ಯಗಳ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಒತ್ತಿ ಹೇಳಿದ್ದಾರೆ.

ಡಿಎಂಕೆ, ಎಐಎಡಿಎಂಕೆ, ಪಿಎಂಕೆ ಮತ್ತು ಎಡ ಪಕ್ಷಗಳ ಶಾಸಕರು ಸಹ ಈ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದರು. ಪಿಟಿಐ

ಬಿಜೆಪಿಯಿಂದ ವಿರೋಧ, ಸಭೆತ್ಯಾಗ

ಈ ನಿರ್ಣಯಕ್ಕೆ ತಮಿಳುನಾಡು ಬಿಜೆಪಿಯು ತೀವ್ರ ವಿರೋಧ ವ್ಯಕ್ತಪಡಿಸಿದೆ. ನಿರ್ಣಯವನ್ನು ಮಂಡಿಸಿದ ತಕ್ಷಣ ಬಿಜೆಪಿ ಶಾಸಕರು ಸದನದಲ್ಲಿ ಪ್ರತಿಭಟನೆ ನಡೆಸಿ, ಸಭಾಧ್ಯಕ್ಷರ ಬಾವಿಗಿಳಿದು ಆಕ್ರೋಶ ವ್ಯಕ್ತಪಡಿಸಿದರು. ಅಂತಿಮವಾಗಿ, ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಸದಸ್ಯರು ಸದನದಿಂದ ವಾಕೌಟ್ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.