'ಕನಿಷ್ಠ ಸರಿಯಾಗಿ ಬಟ್ಟೆ ಹಾಕಿಕೊಳ್ಳಿ': ಅರೆಬೆತ್ತಲಾಗಿ ಮಹಿಳೆಯರಿಂದ ಅರ್ಜಿ ಸ್ವೀಕರಿಸಿದ AAP ಶಾಸಕನ ವಿರುದ್ಧ ಸಿಎಂ ರೇಖಾ ಗುಪ್ತಾ ಗರಂ! Video
ಆಪ್ ಶಾಸಕನ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ದೆಹಲಿ ವಿಧಾನಸಭಾ ಅಧಿವೇಶನದ ಸಮಯದಲ್ಲೇ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ ರೇಖಾ ಗುಪ್ತಾ ಅವರು, ಇದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.

ನವದೆಹಲಿ: ಆಮ್ ಆದ್ಮಿ ಪಕ್ಷದ ಶಾಸಕ ಅನಿಲ್ ಝಾ ವತ್ಸ್ ಅವರು ಸಾರ್ವಜನಿಕರು ಹಾಗೂ ಮಹಿಳೆಯರಿಂದ ಅರ್ಜಿಗಳನ್ನು ಸ್ವೀಕರಿಸುವ ವೇಳೆ ಅರೆಬೆತ್ತಲಾಗಿ(ಒಳ ಉಡುಪಿನಲ್ಲಿ) ಕುಳಿತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಾಯುವ್ಯ ದೆಹಲಿಯ ಕಿರಾರಿ ಕ್ಷೇತ್ರವನ್ನು ಪ್ರತಿನಿಧಿಸುವ ವತ್ಸ್ ಅವರು, ವಿಡಿಯೋದಲ್ಲಿ ವೆಸ್ಟ್ ಮತ್ತು ಶಾರ್ಟ್ಸ್ ಧರಿಸಿ ಕುರ್ಚಿಯಲ್ಲಿ ಕಾಲು ಮಡಚಿ ಕುಳಿತಿರುವುದನ್ನು ನೋಡಬಹುದು. ಆಪ್ ಶಾಸಕರು ತಮ್ಮ ಕ್ಷೇತ್ರದ ಜನರು ತಂದ ದಾಖಲೆಗಳಿಗೆ ಸಹಿ ಹಾಕುತ್ತಿದ್ದಾರೆ.
ಆಪ್ ಶಾಸಕನ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ದೆಹಲಿ ವಿಧಾನಸಭಾ ಅಧಿವೇಶನದ ಸಮಯದಲ್ಲೇ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ ರೇಖಾ ಗುಪ್ತಾ ಅವರು, ಇದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.
ಮತದಾರರನ್ನು, ವಿಶೇಷವಾಗಿ ಮಹಿಳೆಯರನ್ನು ಭೇಟಿಯಾಗುವಾಗ ಚುನಾಯಿತ ಪ್ರತಿನಿಧಿ ಸರಿಯಾಗಿ ಬಟ್ಟೆ ಹಾಕಿಕೊಳ್ಳಬೇಕು. ಈ ರೀತಿಯ ಅಸಭ್ಯ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೇ, ಅವರ ಶಾಸಕತ್ವವನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ಆಗ್ರಹಿಸಿದ್ದಾರೆ.
ಶಾಸಕನ ಸ್ಪಷ್ಟನೆ
ವಿಧಾನಸಭೆ ಕಲಾಪದಲ್ಲೂ ಶಾಸಕ ಅಸಭ್ಯ ಸನ್ನೆಗಳನ್ನು ಮಾಡಿದ್ದಾರೆ ಎಂದು ಸಿಎಂ ಆರೋಪಿಸಿದ್ದು, ಇದಕ್ಕೆ ಪ್ರತಿಯಾಗಿ ಎಎಪಿ ಶಾಸಕ ಅನಿಲ್ ಝಾ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಯಾವುದೇ ತಪ್ಪು ಸನ್ನೆಗಳನ್ನು ಮಾಡಿಲ್ಲ. ಅದಕ್ಕೆ ಸಂಬಂಧಿಸಿದ ವಿಡಿಯೋ ಸಾಕ್ಷಿ ಇದ್ದರೆ ತೋರಿಸಲಿ. ಸಾರ್ವಜನಿಕರ ಸಮಸ್ಯೆಗಳಿಗೆ ಉತ್ತರಿಸಲಾಗದೇ ಈ ರೀತಿಯ ಆಧಾರ ರಹಿತ ಆರೋಪವನ್ನು ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




