ಲೋಕಸಭೆಯಲ್ಲಿ ಭಾರೀ ಗದ್ದಲ; ಸಂಸತ್ತಿನ ಜಂಟಿ ಸಮಿತಿಯ ಅಂಗಳ ತಲುಪಿದ FCRA ತಿದ್ದುಪಡಿ ಮಸೂದೆ; Video
FCRA ತಿದ್ದುಪಡಿ ಮಸೂದೆ2026 ಲೋಕಸಭೆಯಲ್ಲಿ ಮಂಡನೆಯಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ಏರ್ಪಟ್ಟಿತು. ಹಾಗಾಗಿ, ಸಂಸತ್ತು, ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಮಸೂದೆಯನ್ನು ಆಳವಾದ ಪರಿಶೀಲನೆಗಾಗಿ JPC ಒಪ್ಪಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ FCRA ಮಸೂದೆಯು ಲೋಕಸಭೆಯಲ್ಲಿ ಮಂಡನೆಯಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ಏರ್ಪಟ್ಟಿತು. ಹಾಗಾಗಿ, ಸಂಸತ್ತು, ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಮಸೂದೆ, 2026 (FCRA Amendment Bill, 2026) ಯನ್ನು ಆಳವಾದ ಪರಿಶೀಲನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ (JPC) ಒಪ್ಪಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:
FCRA ತಿದ್ದುಪಡಿ ಮಸೂದೆ 2026 ಅನ್ನು ಲೋಕಸಭೆಯಲ್ಲಿ ಅಂಗೀಕರಿಸುವ ವೇಳೆ ರಾಜಕೀಯ ನಾಯಕರ ನಡುವೆ ವಾಕ್ಸಮರ ನಡೆಯಿತು. ಅದರಂತೆ, "ಈ ಸರ್ಕಾರವು ಇಲ್ಲಿಯವರೆಗೆ ಅಲ್ಪಸಂಖ್ಯಾತರ ವಿರುದ್ಧವಲ್ಲದ ಯಾವ ಮಸೂದೆಯನ್ನು ತಂದಿದೆ?" ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೇಳಿದರು. ಇದಕ್ಕೆ ತಿರುಗೇಟು ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, "ವಿರೋಧ ಪಕ್ಷವು ಸದನವನ್ನು ದಾರಿ ತಪ್ಪಿಸುತ್ತಿದ್ದು, ಮಸೂದೆಯಲ್ಲಿ ಅಲ್ಪಸಂಖ್ಯಾತರ ವಿರುದ್ಧವಿರುವ ಯಾವುದಾದರೂ ಒಂದು ಅಂಶವನ್ನು ತೋರಿಸುವಂತೆ" ಸವಾಲು ಹಾಕಿದರು. ಇದರ ನಡುವೆ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್, FCRA ತಿದ್ದುಪಡಿ ಮಸೂದೆಯನ್ನು ತಕ್ಷಣವೇ ಇದನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.
JPC ರಚನೆ
ಮುಂದುವರೆದು, ಸಂಸತ್ತಿನಲ್ಲಿ ಗದ್ದಲದ ನಡುವೆಯೇ, ಧ್ವನಿ ಮತದ ಮೂಲಕ ಈ ಮಸೂದೆಯನ್ನು 31 ಸದಸ್ಯರನ್ನು ಒಳಗೊಂಡ ಜಂಟಿ ಸಂಸದೀಯ ಸಮಿತಿಗೆ ರವಾನಿಸಲಾಗಿದೆ. ಈ ಸಮಿತಿಯಲ್ಲಿ ಲೋಕಸಭೆಯಿಂದ 21 ಹಾಗೂ ರಾಜ್ಯಸಭೆಯಿಂದ 10 ಸದಸ್ಯರಿರುತ್ತಾರೆ. ಸಮಿತಿಯು ಈ ಮಸೂದೆಯ ಪ್ರತಿಯೊಂದು ನಿಬಂಧನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, 2026ರ ಚಳಿಗಾಲದ ಅಧಿವೇಶನದ ಮೊದಲ ವಾರದ ಕೊನೆಯ ದಿನದೊಳಗೆ ವಿವರವಾದ ವರದಿಯನ್ನು ಸಲ್ಲಿಸಲಿದೆ.
FCRA ತಿದ್ದುಪಡಿ ಮಸೂದೆಯ ಮುಖ್ಯ ಉದ್ದೇಶವೇನು?
ವಿದೇಶಿ ನಿಧಿಗಳ ಮೇಲೆ ನಿಗಾ: ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಎನ್‌ಜಿಒ ಮತ್ತು ಸಂಸ್ಥೆಗಳು ವಿದೇಶಗಳಿಂದ ಪಡೆಯುವ ದೇಣಿಗೆ ಹಾಗೂ ಹಣದ ಬಳಕೆಯನ್ನು ಮತ್ತಷ್ಟು ಪಾರದರ್ಶಕಗೊಳಿಸುವುದು.
ರಾಷ್ಟ್ರೀಯ ಭದ್ರತೆ: ವಿದೇಶಿ ಹಣವು ದೇಶದ ಆಂತರಿಕ ಭದ್ರತೆ ಅಥವಾ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಕೆಯಾಗದಂತೆ ತಡೆಯಲು ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವುದು ಈ ತಿದ್ದುಪಡಿಯ ಮುಖ್ಯ ಗುರಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



