ಡ್ರೈವಿಂಗ್ ಅಭ್ಯಾಸ ಮಾಡುತ್ತಿದ್ದ ವೇಳೆ ಕೆರೆಗೆ ಬಿದ್ದ ಕಾರು: ಮಹಿಳೆ ಸಾವು
ಮನೆಗೆ ಬಂದ ಬಳಿಕ ಸ್ಕೂಟರ್‌ನ್ನು ನಿಲ್ಲಿಸಿ, ಗ್ಯಾರೇಜ್‌ನಲ್ಲಿದ್ದ ತಮ್ಮ ಪತಿ ಖರೀದಿಸಿದ್ದ ಹ್ಯುಂಡೈ ಇಯಾನ್ ಕಾರನ್ನು ಹೊರತೆಗೆದಿದ್ದಾರೆ. ಬಳಿಕ ಡ್ರೈವಿಂಗ್ ಅಭ್ಯಾಸ ಮಾಡಲು ಕಾರಿನಲ್ಲಿ ಹೊರಟಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಸಮೀಪದ ಕೆರೆಗೆ ಬಿದ್ದಿದೆ.

ಕೋಲ್ಕತ್ತಾ: ಡ್ರೈವಿಂಗ್ ಅಭ್ಯಾಸ ಮಾಡುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡ ಕಾರೊಂದು ಕೆರೆಗೆ ಉರುಳಿದ ಪರಿಣಾಮ 42 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.
ಕೋಲ್ಕತ್ತಾದ ಕೆಸ್ತೋಪುರದ ಪ್ರಫುಲ್ಲ ಕಾನನ್ (ಪಶ್ಚಿಮ) ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಮೃತ ಮಹಿಳೆಯನ್ನು ಸುಮಿತ್ರಾ ದಾಸ್ ಎಂದು ಗುರುತಿಸಲಾಗಿದೆ. ಸ್ಥಳೀಯರ ಮಾಹಿತಿ ಪ್ರಕಾರ, ಸುಮಿತ್ರಾ ಅವರು ತಮ್ಮ ಮಗಳನ್ನು ಸ್ಕೂಟರ್‌ನಲ್ಲಿ ಶಾಲೆಗೆ ಬಿಟ್ಟು ಮನೆಗೆ ವಾಪಸ್ ಆಗಿದ್ದರು.
ಮನೆಗೆ ಬಂದ ಬಳಿಕ ಸ್ಕೂಟರ್‌ನ್ನು ನಿಲ್ಲಿಸಿ, ಗ್ಯಾರೇಜ್‌ನಲ್ಲಿದ್ದ ತಮ್ಮ ಪತಿ ಖರೀದಿಸಿದ್ದ ಹ್ಯುಂಡೈ ಇಯಾನ್ ಕಾರನ್ನು ಹೊರತೆಗೆದಿದ್ದಾರೆ. ಬಳಿಕ ಡ್ರೈವಿಂಗ್ ಅಭ್ಯಾಸ ಮಾಡಲು ಕಾರಿನಲ್ಲಿ ಹೊರಟಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಸಮೀಪದ ಕೆರೆಗೆ ಬಿದ್ದಿದೆ.
ಕಾರು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದ್ದು, ಸುಮಿತ್ರಾ ಅವರನ್ನು ರಕ್ಷಿಸಲು ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಹಲವು ಪ್ರಯತ್ನಗಳನ್ನು ನಡೆಸಿದ್ದಾರೆ. ಆದರೆ, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಕಾರ್ಯಾಚರಣೆಯ ಬಳಿಕ ಕಾರನ್ನು ಕೆರೆಯಿಂದ ಹೊರತೆಗೆಯಲಾಯಿತು.
ಕಾರನ್ನು ನೀರಿನಿಂದ ಹೊರತೆಗೆದಾಗ ಸುಮಿತ್ರಾ ಅವರ ಮೃತದೇಹ ಕಾರಿನೊಳಗೆ ಪತ್ತೆಯಾಗಿದೆ. ಅವರ ಮುಖ ಕಾರಿನ ಹಿಂಭಾಗದ ಬಾಗಿಲಿನತ್ತ ಹಾಗೂ ಕಾಲುಗಳು ಸ್ಟೀರಿಂಗ್ ಬಳಿಯಲ್ಲಿದ್ದವು. ಇದರಿಂದ ಕಾರು ನೀರಿನಲ್ಲಿ ಮುಳುಗುತ್ತಿದ್ದ ಸಂದರ್ಭದಲ್ಲಿ ಅವರು ಹೊರಬರಲು ಪ್ರಯತ್ನಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಸುಮಿತ್ರಾ ಅವರ ಪತಿ ಕೃಷ್ಣೇಂದು ದಾಸ್ ಇತ್ತೀಚೆಗೆ ಕಾರನ್ನು ಖರೀದಿಸಿದ್ದರು, ಹೀಗಾಗಿ ಸುಮಿತ್ರಾ ಆಗಸ್ಟ್ 22 ರಂದು ನಿಗದಿಯಾಗಿದ್ದ ಚಾಲನಾ ಪರವಾನಗಿ ಪರೀಕ್ಷೆಗೆ ಅಭ್ಯಾಸ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



