ಸ್ವಾತಂತ್ರ್ಯೋತ್ಸವ ಸಂಭ್ರಮದ ಮೇಲೆ ಉಗ್ರರ ಕರಿನೆರಳು: ದೆಹಲಿ ಹೈಕೋರ್ಟ್-ಇಂದಿರಾ ಗಾಂಧಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!
ದೆಹಲಿ ಹೈಕೋರ್ಟ್, ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-3 ಹಾಗೂ ದೆಹಲಿ ಕಂಟೋನ್ಮೆಂಟ್‌ನ ಎಸ್‌ಡಿಎಂ ಕಚೇರಿಗೆ ಶುಕ್ರವಾರ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ.

ನವದೆಹಲಿ: ಸ್ವಾತಂತ್ರ್ಯೋತ್ಸವದ ಒಂದು ದಿನ ಮುನ್ನ ದೆಹಲಿಯ ಹಲವು ಪ್ರಮುಖ ಸ್ಥಳಗಳಿಗೆ ಶುಕ್ರವಾರ ಬಾಂಬ್ ಬೆದರಿಕೆ ಇ-ಮೇಲ್‌ಗಳು ಬಂದಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆ ಮತ್ತಷ್ಟು ಬಿಗಿಗೊಳಿಸಲಾಗಿದೆ.
ದೆಹಲಿ ಹೈಕೋರ್ಟ್, ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-3 ಹಾಗೂ ದೆಹಲಿ ಕಂಟೋನ್ಮೆಂಟ್‌ನ ಎಸ್‌ಡಿಎಂ ಕಚೇರಿ ಸೇರಿದಂತೆ ಹಲವು ಸ್ಥಳಗಳಿಗೆ ಬೆದರಿಕೆ ಬಂದಿದೆ.
ಮೂಲಗಳ ಪ್ರಕಾರ, ಬೆದರಿಕೆ ಹಿನ್ನೆಲೆಯಲ್ಲಿ ರಿಜಿಸ್ಟ್ರಾರ್ ಜನರಲ್ ಅಗತ್ಯ ನೆರವಿಗಾಗಿ ದೆಹಲಿ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದಾರೆ. ಕಳುಹಿಸಲಾದ ಇ-ಮೇಲ್‌ನಲ್ಲಿ “Blast Delhi High Court @ 2:11 pm” ಎಂದು ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆದರಿಕೆ ಬೆನ್ನಲ್ಲೇ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಹೈಕೋರ್ಟ್ ಆವರಣಕ್ಕೆ ಆಗಮಿಸಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ. ಇಡೀ ಆವರಣದಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ.
ರಾಷ್ಟ್ರ ರಾಜಧಾನಿಯ ಹಲವು ಸರ್ಕಾರಿ ಕಟ್ಟಡಗಳಿಗೆ ಬಾಂಬ್ ಬೆದರಿಕೆ ಇ-ಮೇಲ್‌ಗಳು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಈಗಾಗಲೇ ದೆಹಲಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಬೆದರಿಕೆಗಳ ಬೆನ್ನಲ್ಲೇ ಹಲವು ಭದ್ರತಾ ಸಂಸ್ಥೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ.
ಪೊಲೀಸ್ ಮೂಲಗಳ ಪ್ರಕಾರ, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ, ಅಗ್ನಿಶಾಮಕ ಇಲಾಖೆ ಸೇರಿದಂತೆ ಹಲವು ಭದ್ರತಾ ತಂಡಗಳು ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿವೆ. ಸದ್ಯದವರೆಗೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆದರಿಕೆ ಬಂದ ಸ್ಥಳಗಳಲ್ಲಿ ಸ್ಥಳೀಯ ಪೊಲೀಸರು ಹಾಗೂ ಭದ್ರತಾ ಸಂಸ್ಥೆಗಳು ಜಂಟಿಯಾಗಿ ಶೋಧ ನಡೆಸುತ್ತಿವೆ. “ಇಲ್ಲಿಯವರೆಗೆ ಯಾವುದೇ ಸ್ಥಳದಲ್ಲೂ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಹೆಚ್ಚಿನ ತನಿಖೆ ಮುಂದುವರಿದಿದೆ” ಎಂದು ಮೂಲಗಳು ತಿಳಿಸಿವೆ.
ದೆಹಲಿ ಹೈಕೋರ್ಟ್‌ನ ಜಂಟಿ ಕಾರ್ಯದರ್ಶಿ, ವಕೀಲ ಕುನಾಲ್ ಮಾತನಾಡಿ, “ಬಾಂಬ್ ಬೆದರಿಕೆ ನಕಲಿಯಾಗಿರುವಂತೆ ಕಾಣುತ್ತಿದೆ. ಎಲ್ಲವೂ ನಿಯಂತ್ರಣದಲ್ಲಿದೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳ ಇಡೀ ಆವರಣದಲ್ಲಿ ತಪಾಸಣೆ ನಡೆಸುತ್ತಿವೆ. ಸದ್ಯ ಯಾವುದೇ ಬೆದರಿಕೆ ಇಲ್ಲ” ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



