ದೇಶ

ಪಶ್ಚಿಮ ಬಂಗಾಳ: ದೇವಸ್ಥಾನ ಸಮೀಪದ ಹೋಟೆಲ್‌ನಲ್ಲಿ ಭಾರೀ ಅಗ್ನಿ ಅವಘಡ; 7 ಯಾತ್ರಿಕರು ಸಜೀವ ದಹನ

ದೇವಾಲಯ ಪಟ್ಟಣವಾದ ತಾರಾಪೀಠನಲ್ಲಿರುವ ನಾಲ್ಕು ಅಂತಸ್ತಿನ ಹೋಟೆಲ್‌ನ ನೆಲ ಮಹಡಿಯಲ್ಲಿ ಹೆಚ್ಚಿನ ಅತಿಥಿಗಳು ಮಲಗಿದ್ದಾಗ ಇಂದು ಬೆಳಗಿನ ಜಾವ 4:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಪಶ್ಚಿಮ ಬಂಗಾಳ: ದೇವಸ್ಥಾನ ಸಮೀಪದ ಹೋಟೆಲ್‌ನಲ್ಲಿ ಭಾರೀ ಅಗ್ನಿ ಅವಘಡ; 7 ಯಾತ್ರಿಕರು ಸಜೀವ ದಹನ
ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ
Published On :

ತಾರಾಪೀಠ: ಪಶ್ಚಿಮ ಬಂಗಾಳದ ಬಿರ್ಭೂಮ್‌ ಜಿಲ್ಲೆಯ ಹೋಟೆಲ್‌ನಲ್ಲಿ ಸೋಮವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ ಕನಿಷ್ಠ ಏಳು ಯಾತ್ರಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ದೇವಾಲಯ ಪಟ್ಟಣವಾದ ತಾರಾಪೀಠನಲ್ಲಿರುವ ನಾಲ್ಕು ಅಂತಸ್ತಿನ ಹೋಟೆಲ್‌ನ ನೆಲ ಮಹಡಿಯಲ್ಲಿ ಹೆಚ್ಚಿನ ಅತಿಥಿಗಳು ಮಲಗಿದ್ದಾಗ ಇಂದು ಬೆಳಗಿನ ಜಾವ 4:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಗಾಯಾಳುಗಳನ್ನು ರಕ್ಷಿಸಿ ರಾಮಪುರಹತ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.

ಅಗ್ನಿಶಾಮಕ ದಳದ ಪ್ರಾಥಮಿಕ ಅಂದಾಜಿನ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಈ ಬೆಂಕಿ ಕಾಣಿಸಿಕೊಂಡಿರಬಹುದು ಎನ್ನಲಾಗಿದೆ.

ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.